spot_img
Sunday, March 15, 2026
spot_img

ಕೆರಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿ, ರಿಷಬ್ ಶೆಟ್ಟಿ ಫೌಂಡೇಶನ್ (ರಿ) ಬೆಂಗಳೂರು ಇವರ ಆಶ್ರಯದಲ್ಲಿ ಕೆರಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ.20ರಂದು ಉದ್ಘಾಟನೆಗೊಂಡಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸತೀಶ್ ಕೊಠಾರಿ ವಹಿಸಿದ್ದರು. ಕಾರ್ಯಕ್ರಮವನ್ನು ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸಬ್ಲಾಡಿ ಮಂಜಯ್ಯ ಶೆಟ್ಟಿ ನೆರವೇರಿಸಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಮಂಜು ಕೊಠಾರಿ, ಶ್ರೀಮತಿ ಗಿರಿಜಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರತಿಭಾ ಕಾರಂಜಿ ತಾಲೂಕು ನೋಡಲ್ ಅಧಿಕಾರಿ ಸತ್ಯನಾ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ರೂಪರೇಷೆಗಳನ್ನು ವಿವರಿಸಿದರು. ಕರ್ಕುಂಜೆ ಮತ್ತು ಕೊಲ್ಲೂರು ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ರವಿಚಂದ್ರ ಮತ್ತು ಶೈಲಜಾ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಭಾಗವಹಿಸಿದ ಎಲ್ಲರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಕೆರಾಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಎಂ. ನಾಗರಾಜ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಭಾಸ್ಕರ್ ಶೆಟ್ಟಿ ವಂದಿಸಿದರು. ಶಾಲಾ ಗೌರವ ಶಿಕ್ಷಕಿ ಕುಸುಮ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!