spot_img
Tuesday, March 10, 2026
spot_img

ಕರ್ಕುಂಜೆ ಶಾಲೆ: ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಕುಂದಾಪುರ: ಕುಂದಾಪುರ ತಾಲೂಕು ಕರ್ಕುಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಶಿಕ್ಷಕ-ಪೋಷಕ ಮಹಾಸಭೆ, ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ನಡೆಯಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಶೇಖರ್ ಆಚಾರ್ ವಹಿಸಿದ್ದರು. ಕಾರ್ಯಕ್ರಮವನ್ನು ಸೌಕೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಅಶೋಕ್ ಶೆಟ್ಟಿ ಜಾಡ್ಕಟ್ಟು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಅಶೋಕ್ ಶೆಟ್ಟಿ ಹಂದಕುಂದ, ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ್ ಶೆಟ್ಟಿ, ನಸೀಮಾ, ದಾನಿಗಳಾದ ಚಂದ್ರ ಶೆಟ್ಟಿ ನೀರಕೋಡ್ಲು, ಹಿರಿಯರಾದ ನಾರಾಯಣ ನಾಯಕ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ರೇಖಾ, ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೊಠಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯಿಂದ ಹೆಚ್ಚುವರಿ ಪ್ರಕ್ರಿಯೆಯಲ್ಲಿ ವರ್ಗಾವಣೆಗೊಂಡಿರುವ ಮಧುರ ನಾಯಕ್, ಹಾಗೂ ಗಾಯತ್ರಿ ಇವರನ್ನು ಗೌರವಿಸಿ ಬೀಳ್ಕೊಡಲಾಯಿತು. ಶಾಲೆಯ ಎಲ್ಲಾ ಮಕ್ಕಳಿಗೂ ವಿವಿಧ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕರು ಸ್ವಾಗತಿಸಿದರು ಸಹಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು ಯುಕೆಜಿ ಶಿಕ್ಷಕಿ ಅಂಬಿಕಾ ವಂದಿಸಿದರು. ಅಂಗನವಾಡಿ ಶಿಕ್ಷಕಿ ನುಸ್ರುತ, ಎಲ್.ಕೆಜಿ ಶಿಕ್ಷಕಿ ಸರೋಜ, ಶಾಲಾ ಗೌರವ ಶಿಕ್ಷಕಿ ಹೇಮಾವತಿ ಕ್ರೀಡೆಯಲ್ಲಿ ವಿಜೇತ ಮಕ್ಕಳ ಯಾದಿ ವಾಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!