spot_img
Tuesday, March 10, 2026
spot_img

ಹಯ್ಯಂಗಾರಿನಲ್ಲಿ ಬಿ.ಎಸ್.ಎನ್.ಎಲ್ ಟವರ್ ಉದ್ಘಾಟನೆ

ಬೈಂದೂರು: ಪ್ರಧಾನಿ ನರೇಂದ್ರ ಮೋದಿಯವರು ಹಳ್ಳಿ-ಹಳ್ಳಿಗಳಿಗೂ ಒಳ್ಳೆಯ ನೆಟ್‌ವರ್ಕ್, ಡಿಜಿಟಲ್ ಸೇವೆಗಳು ಲಭ್ಯವಾಗಬೇಕು ಅನ್ನುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಆ ನೆಲೆಯಲ್ಲಿ ರಾಷ್ಟ್ರದ ಗ್ರಾಮೀಣ ಭಾಗಗಳಿಗೂ ಟವರ್ ನಿರ್ಮಾಣ ಮಾಡುವ ಕೆಲಸ ಆಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ಅನೇಕ ಹಳ್ಳಿಗಳಿಗೂ ಹೊಸದಾಗಿ ಬಿ‌ಎಸ್‌ಎನ್‌ಎಲ್ ಟವರ್‌ಗಳನ್ನು ಮಂಜೂರು ಮಾಡಿದ್ದು, ಈಗಾಗಲೇ ಕೆಲವು ಟವರ್‌ಗಳು ಚಾಲನೆ ನೀಡಲಾಗಿದೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಬೈಂದೂರು ಕ್ಷೇತ್ರದ ಕೆರಾಡಿ ಗ್ರಾಮದ ಹಯ್ಯಂಗಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಬಿ‌ಎಸ್ಸೆನ್ನೆಲ್ ಟವರ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆರಾಡಿ ಗ್ರಾಮದ ಹಯ್ಯಂಗಾರಿನ ಈ ಬಿ‌ಎಸ್ಸೆನ್ನೆಲ್ ಟವರ್ ಚಾಲನೆ ಆಗುವುದರಿಂದ ಈ ಊರು ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳಿಗೂ ಉತ್ತಮ ಮೊಬೈಲ್ ಸಂಪರ್ಕ ಸಾಧ್ಯವಾಗಲಿದೆ. ಡಿಜಿಟಲ್ ಸೇವೆಗಳು ಸುಲಭವಾಗಿ ಲಭ್ಯವಾಗಲಿದೆ. ಪ್ರತೀ ಗ್ರಾಮಕ್ಕೂ ನಿಶ್ಚಿತ ಸಂಪರ್ಕ, ಉತ್ತಮ ಸೇವೆ ಹಾಗೂ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಅವರು ಹೇಳಿದರು.

ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಮಂಡಲದ ಅಧ್ಯಕ್ಷೆ ಅನಿತಾ ಆರ್. ಕೆ., ಮಾಜಿ ಅಧ್ಯಕ್ಷ ದೀಪಕ್ ಶೆಟ್ಟಿ ಡಾ.ಅತುಲ್ ಕುಮಾರ್ ಶೆಟ್ಟಿ, ಮುಖಂಡರು, ಪ್ರಮುಖರು, ಗ್ರಾಮಸ್ಥರು ಊರ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!