spot_img
Saturday, March 14, 2026
spot_img

ಶಿಕ್ಷಣದ ಜೊತೆಗೆ ಉಚಿತ ಮಧ್ಯಾಹ್ನದೂಟ ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ವಿಶೇಷತೆ | ಜ್ಞಾನದ ಹಸಿವಿನ ಜೊತೆ ಹೊಟ್ಟೆ ಹಸಿವಿಗೆ ಮಿಡಿದ ಆಡಳಿತ

ಕುಂದಾಪುರ :ಯಾವುದೇ ದಾನಕ್ಕಿಂತ ಅನ್ನದಾನ ಅತ್ಯಂತ ಪುಣ್ಯದ ಕೆಲಸ. ಹೀಗಾಗಿ ಅನೇಕ ದೇವಾಲಯಗಳಲ್ಲಿ ಹಾಗೂ ಶುಭ ಕಾರ್ಯಗಳಲ್ಲಿ ಅನ್ನದಾಸೋಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಆದರೆ ಶಿಕ್ಷಣಕ್ಕೆ ಹೆಚ್ಚಿನ ಹಸರುವಾಸಿಯಾಗಿರುವ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರವರ್ತಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಸದ್ದಿಲ್ಲದೆ ಪ್ರತಿನಿತ್ಯ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಅನ್ನದಾಸೋಹ ಕಾರ್ಯಕ್ರಮ ನಡೆಯುತ್ತಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

ಕಳೆದ ಸುಮಾರು ಎಂಟು ದಶಕಗಳಿಂದ ಪ್ರದೇಶದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡುತ್ತಾ ಬಂದಿರುವ ಗಂಗೊಳ್ಳಿಯ ಸದಸ್ಯತಿ ವಿದ್ಯಾಲಯ ವಿದ್ಯಾ ಸಂಸ್ಥೆಯು ರಾಜ್ಯದಲ್ಲೇ ಉತ್ತಮ ಹೆಸರು ಕೊಂಡು ಸಹಸ್ರಾರು ವಿದ್ಯಾರ್ಥಿಗಳ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಪ್ರತಿನಿತ್ಯ ಸುಮಾರು 3 ರಿಂದ 20 ಕಿ.ಮೀ. ದೂರದಿಂದ ಬರುತ್ತಿರುವ ಸಹಸ್ರರು ಮಂದಿ ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಜನೆಯಲ್ಲಿ ತೊಡಗಿಕೊಂಡಿದ್ದಾರೆ.

ವಿದ್ಯಾಸಂಸ್ಥೆಗೆ ಬರುವ ವಿದ್ಯಾರ್ಥಿಗಳು ಮಧ್ಯಾಹ್ನ ಹಸಿದ ಹೊಟ್ಟೆಯಲ್ಲಿ ಕುಳಿತುಕೊಳ್ಳಬಾರದು ಮತ್ತು ಹೊರಗಿನ ಆಹಾರವನ್ನು ಸೇವಿಸಿ ಆರೋಗ್ಯವನ್ನು ಹಾಳು ಮಾಡಿಕೊಳ್ಳಬಾರದೆಂಬ ಉದ್ದೇಶದಿಂದ ಶಾಲೆಯ ಆಡಳಿತ ಮಂಡಳಿಯು, ದೂರದ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಚಿತವಾಗಿ ಮಧ್ಯಾಹ್ನ ಊಟವನ್ನು ನೀಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಯಾವುದೇ ಹೆಚ್ಚುವರಿ ಶುಲ್ಕ ಮತ್ತು ಮಧ್ಯಾಹ್ನದೂಟಕ್ಕಾಗಿ ಹೆಚ್ಚುವರಿ ಶುಲ್ಕವನ್ನು ಸಂಗ್ರಹಿಸದೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಉತ್ತಮ ಗುಣಮಟ್ಟದ ಮಧ್ಯಾಹ್ನದೂಟವನ್ನು ನೀಡಲಾಗುತ್ತಿದೆ.

ಕಾಲೇಜಿನ ಸುಮಾರು 140 ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಆಂಗ್ಲ ಮಾಧ್ಯಮ ಶಾಲೆಯ ಸುಮಾರು 440 ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಲ್ಲಿ ಮಧ್ಯಾಹ್ನದೂಟದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಶಾಲೆಯ ಮಕ್ಕಳಿಗೆ ಉಚಿತವಾಗಿ ಮಧ್ಯಾಹ್ನದೂಟ ನೀಡುತ್ತಿರುವುದರಿಂದ ಶಾಲಾ ಆಡಳಿತ ಮಂಡಳಿ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಪ್ರತಿ ತಿಂಗಳು ಅಡುಗೆ ಮಾಡಿದ ಸಿಬ್ಬಂದಿಗೆ ಸಂಬಳ ಸೇರಿದಂತೆ ಸುಮಾರು ಒಂದು ಲಕ್ಷ ರೂ.ಗಳನ್ನು ವಿದ್ಯಾರ್ಥಿಗಳ ಮಧ್ಯಾಹ್ನದೂಟಕ್ಕೆ ಖರ್ಚು ಮಾಡುತ್ತಿದೆ. ಇದರಿಂದ ಪ್ರತಿವರ್ಷ ಸುಮಾರು 12 ಲಕ್ಷ ರೂ.ಗಳನ್ನು ಶಾಲಾ ಆಡಳಿತ ಮಂಡಳಿಯ ಮಕ್ಕಳ ಮಧ್ಯಾಹ್ನದೂಟದ ಯೋಜನೆಗಾಗಿ ವಿನಿಯೋಗಿಸಬೇಕಾಗಿದೆ.

ಆಡಳಿತ ಮಂಡಳಿಗೆ ಹೊರೆಯಾದರೂ ತೊಂದರೆಯಿಲ್ಲ, ದೂರದೃಷ್ಟಿಯಿಂದ ಶಾಲಾ ಆಡಳಿತ ಮಂಡಳಿ ಈ ಯೋಜನೆಯ ಯಶಸ್ಸಿಗೆ ದಿಟ್ಟ ಹೆಜ್ಜೆಯನ್ನಿಟ್ಟದೆ. ದಾನಿಗಳು, ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಶಾಲೆಯ ಈ ಯೋಜನೆಗೆ ಬೆಂಬಲ ಪೆÇ್ರೀತ್ಸಾಹ ನೀಡಲಿದ್ದಾರೆ ಎಂಬ ನಂಬಿಕೆಯಿಂದ ಶಾಲೆಯ ಮಂಡಳಿ ಮಕ್ಕಳಿಗೆ ಉಚಿತವಾಗಿ ಮಧ್ಯಾಹ್ನದೂಟವನ್ನು ಬಡಿಸುತ್ತಿದೆ. ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಈ ಮಹತ್ಕಾರ್ಯ ಉಳಿದ ವಿದ್ಯಾಸಂಸ್ಥೆಗಳಿಗೆ ಮಾದರಿಯಾಗಿದೆ. ಮಕ್ಕಳ ಹಸಿವು ತಣಿಸಿ ಅವರಿಗೆ ಉತ್ತಮ ಗುಣಮಟ್ಟದ ಮಧ್ಯಾಹ್ನದೂಟ ನೀಡುವ ಶಾಲೆಯ ಆಡಳಿತ ಮಂಡಳಿಯ ಯೋಜನೆಗೆ ಎಲ್ಲರೂ ಸಹಕಾರ ನೀಡಬೇಕಿದೆ.

  • ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಮಕ್ಕಳ ಮಧ್ಯಾಹ್ನದೂಟಕ್ಕೆ ಧನ ಸಹಾಯ, ಸಹಕಾರ ಮಾಡಲಿಚ್ಛಿಸುವವರು ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಹೆಸರಿನ ಉಳಿತಾಯ ಖಾತೆ ಸಂಖ್ಯೆ 0604101000107 ಜಮೆ ಮಾಡಬಹುದು ಅಥವಾ ಶಾಲೆಯ ಕಚೇರಿಯನ್ನು ಸಂಪರ್ಕಿಸಬಹುದು – ಕವಿತಾ ಎಂ.ಸಿ., ಪ್ರಾಂಶುಪಾಲೆ, ಸ.ವಿ. ಪದವಿಪೂರ್ವ ಕಾಲೇಜು

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!