spot_img
Tuesday, March 10, 2026
spot_img

ಅಂಪಾರು ಸಂಜಯ ಗಾಂಧಿ ಶಿಕ್ಷಣ ಸಂಸ್ಥೆಯಲ್ಲಿ ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಸಂಜಯ ಗಾಂಧಿ ಪ್ರೌಢಶಾಲೆ ಅಂಪಾರು ಮತ್ತು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು ಇವರ ಜಂಟಿ ಸಹಭಾಗಿತ್ವದಲ್ಲಿ ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನೆರವಿನೊಂದಿಗೆ ನ.೨೬ರಂದು ನಡೆಯಿತು.
ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ಬಾಬು ಹೆಗ್ಡೆ ಪ್ರತಿಭಾ ಕಾರಂಜಿ ಉದ್ಘಾಟಿಸಿ, ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರದ ಕುರಿತು ಮಾತನಾಡಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಇವರು ವಹಿಸಿ, ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್, ಸಂಜಯ ಗಾಂಧಿ ಶಿಕ್ಷಣ ಸಂಸ್ಥೆಗಳ ಧ್ಯೇಯ, ಸಾಧನೆ ಕುರಿತು ತಿಳಿಸಿ, ಆಗಮಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಂಪಾರು ಸಿ.ಎ. ಬ್ಯಾಂಕಿನ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಅಂಪಾರು ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ ಕಿಣಿ, ಸಂಜಯ ಗಾಂಧಿ ಕಮಿಟಿ ಅಧ್ಯಕ್ಷೆ ಶಾರದಾ, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ಟ್ರಸ್ಟ್ ಖಜಾಂಚಿ ಕೊಡ್ಲಾಡಿ ಸುಭಾಷ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಇದೇ ವೇದಿಕೆಯಲ್ಲಿ ಶಿಕ್ಷಣ ಇಲಾಖೆ ಕುಂದಾಪುರ ಇಲ್ಲಿನ ಇಲಾಖಾಧಿಕಾರಿ ಮಿಲ್ಟನ್ ರೋಹಿತ್ ಕ್ರಾಸ್ತಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ, ಸತೀಶ್- ಸಂಪನ್ಮೂಲ ವ್ಯಕ್ತಿ ಬಿದ್ಕಲ್ ಕಟ್ಟೆ, ಶ್ರೀರಾಮ ಮೊಗವೀರ ಕಾರ್ಯದರ್ಶಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ, ಸುಕನ್ಯಾ – ಕ್ಷೇತ್ರ ಸಂಪನ್ಮೂಲ ವ್ಯಕ್ತಿ, ಪ್ರದೀಪ್ ಕುಮಾರ್ ಶೆಟ್ಟಿ( ಬಿ‌ಐ‌ಇ‌ಆರ್‌ಟಿ) ಮತ್ತು ಸಂಪನ್ಮೂಲ ವ್ಯಕ್ತಿ ಶಂಕರ್ ದೇವಾಡಿಗ ಇವರು ಉಪಸ್ಥಿತರಿದ್ದರು.

ಶಿಕ್ಷಣ ಸಂಯೋಜಕ ಶಂಕರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಜಯ ಗಾಂಧಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಉದಯ್ ಕುಮಾರ್ ಸ್ವಾಗತಿಸಿ, ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ವಂದಿಸಿದರು. ಕಳೆದ ಐದು ವರ್ಷಗಳಿಂದ ಅಂಪಾರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ್ದ ರಾಘವೇಂದ್ರ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಸಹಶಿಕ್ಷಕಿ ಕಾವ್ಯ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!