spot_img
Tuesday, March 10, 2026
spot_img

ವಿಕಸಿತ ಭಾರತಕ್ಕೆ ಆರ್ಥಿಕ ಸುಧಾರಣೆಗಳ ಕೊಡುಗೆ ಅಪಾರ-ಡಾ. ಸುಬ್ರಹ್ಮಣ್ಯ ಎ.

ಶಂಕರನಾರಾಯಣ: 1991ರ ಆರ್ಥಿಕ ಸುಧಾರಣೆಗಳು ಭಾರತದ ಆರ್ಥಿಕತೆಯ ಮೂಲಭೂತ ದಿಕ್ಕನ್ನೇ ಬದಲಿಸಿ, ಅಭಿವೃದ್ಧಿಯ ಹೊಸ ದಾರಿಯನ್ನು ತೆರೆದವು. ಇದರಿಂದ ಖಾಸಗಿ ವಲಯದ ಪಾಲ್ಗೊಳ್ಳುವಿಕೆ ಹೆಚ್ಚಿತು, ತಂತ್ರಜ್ಞಾನ ಅಭಿವೃದ್ಧಿಗೆ ನೂತನ ದಾರಿ ತೆರೆಯಿತು ಮತ್ತು ಸೇವಾ ವಲಯವು ದೇಶದ ಜಿಡಿಪಿಗೆ ಪ್ರಮುಖ ಕೊಡುಗೆಯನ್ನು ನೀಡುವ ಹಂತಕ್ಕೇರಿತು.2014ರ ನಂತರದ ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದಂತಹ ಯೋಜನೆಗಳು ಆ ಸುಧಾರಣೆಗಳ ಬುನಾದಿಯ ಮೇಲೆ ವಿಕಸಿತ ಭಾರತದ ಕನಸನ್ನು ಮುಂದುವರಿಸುತ್ತಿವೆ. ಇವು ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಯುವ ಶಕ್ತಿಯನ್ನು ಒಂದಾಗಿಸಿ ಭಾರತದ ಪ್ರಗತಿಯನ್ನು ವೇಗಗೊಳಿಸುತ್ತಿವೆ ಎಂದು ಶ್ರೀಮತಿ ಲಕ್ಷ್ಮೀ ಸೋಮ ಬಂಗೇರ ಸ.ಪ್ರ.ದ.ಕಾಲೇಜು, ಕೋಟ ಪಡುಕರೆ ಇದರ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಸುಬ್ರಹ್ಮಣ್ಯ ಎ, ಹೇಳಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಅರ್ಥಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆರ್ಥಿಕ ಸುಧಾರಣೆಗಳ ಪೂರ್ವ ಮತ್ತು ನಂತರದ ಭಾರತದ ಸ್ಥಿತಿ ಎನ್ನುವ ವಿಷಯದ ಕುರಿತು ವಿಶೇ? ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ರವರು ಸರ್ಕಾರದ ಆರ್ಥಿಕ ನೀತಿಗಳು ಮತ್ತು ಸುಧಾರಣೆಗಳು ವ್ಯಕ್ತಿಯ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಹೇಗೆ ಸಹಾಯಕವಾಗಬಹುದು ಎಂಬುದರ ಕುರಿತು ಮಾತನಾಡಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ಡಾ.ವಸಂತ ಜಿ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ. ನಳಿನಶ್ರೀ ಆರ್ ಎನ್ ಉಪಸ್ಥಿತರಿದ್ದರು. ಭಾವನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಆಶಾ ವಂದಿಸಿದರು ಹಾಗೂ ರತಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!