spot_img
Monday, March 16, 2026
spot_img

ಬಿ. ಬಿ. ಹೆಗ್ಡೆ ಕಾಲೇಜು ಯುವ ರೆಡ್‌ಕ್ರಾಸ್ ಘಟಕದಿಂದ ರಕ್ತ ನಿಧಿಗೆ ಶೈಕ್ಷಣಿಕ ಭೇಟಿ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್
ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ
ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ
ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ
ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ವಿಭಾಗಗಳನ್ನು ವೀಕ್ಷಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ|
ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ಸಂಯೋಜಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ
ಕುಂದಾಪುರ ಇದರ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ, ಖಜಾಂಚಿಗಳಾದ ಶ್ರೀ ಶಿವರಾಮ್ ಶೆಟ್ಟಿ
ಹಾಗೂ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಯಾದ ಶ್ರೀ ಯೋಗೀಶ್
ಶ್ಯಾನುಭೋಗ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!