spot_img
Tuesday, March 10, 2026
spot_img

ಯುವ ಬಂಟರ ಸಂಘದ ವತಿಯಿಂದ ರಕ್ತದಾನ ಶಿಬಿರ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ ಬಿ ಹೆಗ್ಡೆ  ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಶ್ರೀ ಜಯಕರ ಶೆಟ್ಟಿ ಶಾನಾಡಿ, ಗಿಳಿಯಾರು ಕುಶಲ್ ಹೆಗ್ಡೆ ಮೆಮೊರಿಯಲ್  ಟ್ರಸ್ಟಿನ  ಉದಯ್ ಕುಮಾರ್ ಹೆಗ್ಡೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ  ಬಿ.ಅರುಣ್ ಕುಮಾರ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತ್ರ ಸಂಘದ ಮಾಜಿ ಸಂಚಾಲಕರಾದ ಶ್ರೀ ಆವರ್ಸೆ ಸುಧಾಕರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ  ಮಹೇಶ ಹೆಗ್ಡೆ ಮೊಳಹಳ್ಳಿ, ಯುವ ಬಂಟರ ಸಂಘದ ಮಹಾ ಪೋಷಕರಾದ  ಅರುಣ್ ಕುಮಾರ್ ಹೆಗ್ಡೆ ಯಡಾಡಿ ಮತ್ಯಾಡಿ,  ವಿಜಯ ಶೆಟ್ಟಿ ಸತ್ವಾಡಿ,ಶ್ರೀ ಜಡ್ಡಾಡಿ ವಿಜಯ ಶೆಟ್ಟಿ, ನಕ್ಷತ್ರ ಜ್ಯುವೆಲ್ಸ್ ನ  ನವೀನ್ ಹೆಗ್ಡೆ,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ ಶೆಟ್ಟಿ, ರೋಟರಿ ಕ್ಲಬ್ ಮಿಡ್ ಟೌನ್ ಅಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ಯುವ ಬಂಟರ ಸಂಘದ ಮಾಜಿ ಅಧ್ಯಕ್ಷರಾದ  ಸುಕೇಶ್ ಶೆಟ್ಟಿ ಹೊಸಮಠ, ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಸಂಘದ ಪ್ರಧಾನ ಕಾರ್ಯದರ್ಶಿ  ಮುರಳಿದರ ಶೆಟ್ಟಿ, ಕೋಶಾಧಿಕಾರಿ  ಭರತ್ ರಾಜ್ ಶೆಟ್ಟಿ ಜಾಂಬೂರು ಹಾಗೂ ಕಾರ್ಯಕ್ರಮದ ಸಂಚಾಲಕರಾದ ಪ್ರಶಾಂತ್ ಶೆಟ್ಟಿ ಶಿರೂರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 2025 ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬಂಟ ಸಮಾಜದ ಸಾಧಕರನ್ನು ಅಭಿನಂದಿಸಲಾಯಿತು. 9 ಮಂದಿ ಅನಾರೋಗ್ಯ ಪೀಡಿತರಿಗೆ 90000 ಸಹಾಯಧನದ ಚೆಕ್ ವಿತರಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ಶೆಟ್ಟಿ ನಿಡೂಟಿ ಕಾರ್ಯಕ್ರಮ ನಿರೂಪಿಸಿ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿರಾಜೇಶ್ ಶೆಟ್ಟಿ ವಕ್ವಾಡಿ ವಂದನಾರ್ಪಣೆ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!