spot_img
Tuesday, March 10, 2026
spot_img

ಕ್ರೀಡೆ ಕಲಿಕೆಗೆ ಪೂರಕ-ಮಹಾಲಿಂಗ ನಾಯ್ಕ್ | ಕೊಲ್ಲೂರು ಶ್ರೀ ದೇವಳದ ಹೊಸೂರು ಪ್ರೌಢಶಾಲೆಯ ಕ್ರೀಡಾಕೂಟ

ಕುಂದಾಪುರ: ಕಲಿಕೆಯೊಂದಿಗೆ ಕ್ರೀಡೆ ಮತ್ತಿತರ ಪಾಠೇತರ ಚಟುವಟಿಕೆಗಳು, ವಿದ್ಯಾರ್ಥಿಗಳಿಗೆ ಅತೀ ಅವಶ್ಯಕ. ಸದೃಢ ದೇಹ, ಮನಸ್ಸಿಗೆ ಕ್ರೀಡೆ ಪೂರಕ. ಕ್ರೀಡೆಗೆ ಇದೀಗ ಬಹಳಷ್ಟು ಉತ್ತೇಜನ ಸಿಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು, ಸಾಧನೆ ಮಾಡಿ ಗುರುತಿಸಿ ಕೊಳ್ಳಬೇಕು. ಗ್ರಾಮೀಣ ಪ್ರದೇಶದ ಮಕ್ಕಳು, ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಮಿಂಚಬೇಕು. ಇದಕ್ಕೆ ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಸರಕಾರದಿಂದ ಮೀಸಲಾತಿ ಕೂಡ ಸಿಗುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು, ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಆಸಕ್ತಿಯಿಂದ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಹಾಲಿಂಗ ನಾಯ್ಕ್ ಹೇಳಿದರು.

ಅವರು ಕೊಲ್ಲೂರು ಶ್ರೀ ದೇವಳದ ಹೊಸೂರು ಪ್ರೌಢಶಾಲೆಯ ೨೦೨೫-೨೬ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳ ಗೌರವ ವಂದನೆ ಸ್ವೀಕರಿಸಿ, ಮಾತನಾಡಿದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಚಂದ್ರ ಶೆಟ್ಟಿ ಚಿತ್ತೂರು ಇವರು ಕ್ರೀಡಾ ಧ್ವಜಾರೋಹಣ ಮಾಡಿ, ಶುಭ ಹಾರೈಸಿದರು. ಕೆರಾಡಿಯ ವರಸಿದ್ಧಿ ವಿನಾಯಕ ಪಿ.ಯು.ಕಾಲೇಜಿನ ನಿರ್ದೇಶಕರಾದ ಪ್ರದೀಪ್ ಕುಮಾರ್ ಶೆಟ್ಟಿ ಇವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ, ಎಲ್ಲಾ ವಿದ್ಯಾರ್ಥಿಗಳು, ನಿಮ್ಮ ಸುತ್ತಮುತ್ತ ಸಾಧನೆಯನ್ನು ಮಾಡಿ ಗುರುತಿಸಿಕೊಂಡ ವ್ಯಕ್ತಿಗಳನ್ನು ಆದರ್ಶವಾಗಿಟ್ಟುಕೊಂಡು, ನೀವೂ ಕೂಡ ಭವಿಷ್ಯದಲ್ಲಿ ಉತ್ತಮ ಸಾಧಕರಾಗಿ ಬೆಳೆಯ ಬೇಕು ಎಂದು ತಿಳಿಸಿದರು. ಊರಿನ ಹಿರಿಯರಾದ ಶಂಕರ ಶೆಟ್ಟಿ, ಕಲ್ಮಕ್ಕಿ-ಹರ ದೀಪ ಬೆಳಗಿಸಿ, ಕ್ರೀಡೋತ್ಸವವನ್ನು ಉದ್ಘಾಟಿಸಿದರು.

ಸ್ಥಳೀಯ ಇಡೂರು ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಪೂಜಾರಿ, ವಂಡ್ಸೆಯ ಶಿಕ್ಷಣ ಸಂಯೋಜಕರಾದ ವೆಂಕಪ್ಪ ಉಪ್ಪಾರ, ಸ್ಥಳೀಯ ವಿದ್ಯಾಭಿಮಾನಿ ಶ್ರೀಧರ ಆಚಾರ್ಯ, ನಾರಾಯಣ ಶೆಟ್ಟಿ ನಿಡೂಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪಿ.ಯು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸುಕೇಶ ಶೆಟ್ಟಿ ಮತ್ತು ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ. ಸದಸ್ಯರ ಜಿಲ್ಲಾ ಕ್ರೀಯಾ ವೇದಿಕೆಯ ವತಿಯಿಂದ ಜಿಲ್ಲಾ ಮಟ್ಟದ ಅತ್ಯತ್ತಮ ಶಿಕ್ಷಕ ಪ್ರಶಸ್ತಿಯಿಂದ ಪುರಸ್ಕೃತರಾದ ಚಿತ್ತೂರು ಪಿ.ಎಂ.ಶ್ರೀ ಸ.ಹಿ.ಪ್ರಾ.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಮತ್ತು ಟೀಚರ್ಸ್ ಕೋ-ಅಪರೇಟೀವ್ ಬ್ಯಾಂಕ್ ನ ನಿರ್ದೇಶಕರಾಗಿ ಆಯ್ಕೆಯಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅರೆಶಿರೂರು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೀವ ಶೆಟ್ಟಿ ನಿಡೂಟಿ ಇವರನ್ನು ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.
ಪ್ರಸಕ್ತ ವರ್ಷ ಶಾಲಾ ಶಿಕ್ಣಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ, ಕ್ರಮವಾಗಿ ನಡಿಗೆ ಮತ್ತು ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಾಲೆಯ ಹೆಮ್ಮೆಯ ವಿದ್ಯಾರ್ಥಿಗಳಾದ ಶ್ರೇಯಸ್ ಕುಮಾರ್ ಶೆಟ್ಟಿ ಮತ್ತು ಮಂಜುನಾಥ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು.

ಶಾಲಾ ಮುಖ್ಯಶಿಕ್ಷಕರಾದ ಎ.ಶಿವರಾಮ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಸಹಶಿಕ್ಷಕರಾದ ಹೆರಿಯಣ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉದಯ ನಾಯ್ಕ ವಂದಿಸಿದರು. ಶಾಲಾ ಅಧ್ಯಾಪಕರಾದ ಕಾಂತಿ ಕೆ.ಶೆಟ್ಟಿ, ಅರುಣ ಕುಮಾರಿ, ಹರೀಶ್ ಬಾರ್ಕೂರು, ಸಿಬ್ಬಂದಿಗಳಾದ ಜ್ಯೋತಿ ನಾಯ್ಕ ಮತ್ತು ಜ್ಯೋತಿ ಹೊಸೂರು ಕಾರ್ಯಕ್ರಮದ ವಿವಿಧ ಚಟುವಟಿಕೆಗಳನ್ನು ನಿರ್ವಹಿಸಿದರು. ಕ್ರೀಡೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಹಳೆ ವಿದ್ಯಾರ್ಥಿಗಳಿಗೂ ಕೂಡ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!