spot_img
Monday, March 9, 2026
spot_img

ಜಿ ಎಮ್‌ನಲ್ಲಿ 21ನೇ ವಾರ್ಷಿಕೋತ್ಸವದ ಸಂಭ್ರಮ

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನ ೨೧ನೇ ವರ್ಷದ ವಾರ್ಷಿಕೋತ್ಸವವು ನವೆಂಬರ್ 27 ಹಾಗೂ 28ರಂದು ಅತ್ಯಂತ ಸಂಭ್ರಮದಿಂದ ನೆರವೇರಿತು. ಮೊದಲನೆಯ ದಿನದ ಕಾರ್ಯಕ್ರಮದ ಮುಖ್ಯ ಅತಿಥಿ ಉಡುಪಿ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಮಾತನಾಡಿ ಶಾಲಾ ವಾರ್ಷಿಕೋತ್ಸವವು ನಮ್ಮ ಮಕ್ಕಳ ಸಾಧನೆ, ಬೆಳವಣಿಗೆ ಮತ್ತು ಪ್ರತಿಭೆಯನ್ನು ಆಚರಿಸುವ ವಿಶೇಷ ಸಂದರ್ಭವಾಗಿದೆ. ಜಿ ಎಮ್‌ನ ವೇದಿಕೆ ಇಲ್ಲಿನ ಮಕ್ಕಳ ಆತ್ಮಸ್ಥೈರ್ಯ ನಗುವನ್ನು ನೋಡುವಾಗ ರಿಯಾಲಿಟಿ ಶೋ ನೋಡಿದ ಅನುಭವವಾಗುತ್ತಿದೆ. ಮಕ್ಕಳು ಮುಂದೆ ಉತ್ತಮ ಸಾಧನೆಯನ್ನು ಮಾಡಿದ ನಂತರ ತಾನು ಕಲಿತ ವಿದ್ಯಾ ದೇಗುಲವನ್ನು, ಗುರುಗಳನ್ನು, ಪೋಷಕರನ್ನು ನೆನಪು ಮಾಡಿಕೊಳ್ಳಬೇಕೆಂದರು.

ಅಪರಾಹ್ನದ ಕಾರ್ಯಕ್ರಮದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಕುಡ್ಲು ಮಾತನಾಡಿ ಜಿ ಎಮ್ ನಾನು ಕಂಡಂತಹ ಅತ್ಯಂತ ಶಿಸ್ತುಬದ್ಧ ಶಾಲೆ. ಇಲ್ಲಿ ಜ್ಞಾನ, ಶೃದ್ಧೆ, ಶಿಸ್ತು ಮತ್ತು ವ್ಯಕ್ತಿತ್ವಕ್ಕೆ ಪ್ರಾಮುಖ್ಯತೆಯನ್ನು ಕೊಡಲಾಗುತ್ತಿದೆ. ಮಕ್ಕಳಿಗೆ ಜೀವನದಲ್ಲಿ ಸಾಧನೆಗೆ ಕಠಿಣಶ್ರಮ, ಬದ್ಧತೆ ಅತೀ ಅವಶ್ಯಕ. ಭವಿಷ್ಯದಲ್ಲಿ ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯದ ಕಾಳಜಿ ಇರಬೇಕೆಂದರು.

ಎರಡನೇ ದಿನದ ಕಾರ್ಯಕ್ರಮದಲ್ಲಿ ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಶ್ರೀಯುತ ಪ್ರವೀಣ್ ಭೋಜ ಶೆಟ್ಟಿ ಇವರು ಮಾತನಾಡಿ ವಿದ್ಯಾರ್ಥಿಗಳ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ವಿದ್ಯಾರ್ಥಿಗಳಿಗೆ ಜೀವನದ ಕುರಿತು ತಿಳಿಹೇಳುವುದರ ಮೂಲಕ ಜೀವನವೆಂದರೆ ನಮ್ಮ ಮೆದುಳಿನಿಂದ ಹೃದಯಕ್ಕೆ ಬರುವ ಒಳ್ಳೆಯ ತರಂಗಗಳು ಎಂದು ತಿಳಿಸಿದರು ಮತ್ತು ನಾಳೆಗಿಂತ ಇಂದೆ ಉತ್ತಮ, ನಿಮ್ಮ ಗುರಿ ಮತ್ತು ನೀವು ಮಾಡಬೇಕಾದ ಕೆಲಸಗಳೆಲ್ಲವನ್ನು ಒಂದು ಚೌಕಟ್ಟಿನಲ್ಲಿ ಸಾಧಿಸಿ ಎಂದು ತಿಳಿಸಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಮಾತನಾಡಿ ಜಿ ಎಮ್ ಯಶಸ್ಸಿಗೆ ಇಲ್ಲಿನ ಸಿಬ್ಬಂದಿ ವರ್ಗದವರ ಪರಿಶ್ರಮ ಹಾಗೂ ಪೋಷಕರ ಸಹಕಾರವೇ ಕಾರಣ. ರಾಷ್ಟ್ರೀಯ ಶಿಕ್ಷಣದ ಅಂಶಗಳನ್ನು ಜಿ ಎಮ್ ಪ್ರಾರಂಭದಿಂದಲೂ ಅಳವಡಿಸಿಕೊಂಡು ಬಂದಿದೆ. ಮಕ್ಕಳಿಗೆ ಅಂಕಗಳನ್ನು ಪಡೆಯಲು ಉತ್ತೇಜಿಸುವುದರ ಜೊತೆಗೆ ಶಾಲೆಯ ಎಲ್ಲಾ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು. ಸಂಸ್ಕಾರಗಳು ಮರೆಯಾಗುತ್ತಿರುವ ಈ ದಿನದಲ್ಲಿ ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸಬೇಕೆಂದರು.

ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ವರದಿ ವಾಚಿಸಿದರು. ಸಂಸ್ಥೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಶಿಕ್ಷಕ ವೃಂದ, ಸಹ ಸಿಬ್ಬಂದಿ ವರ್ಗದವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಕಳೆದ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಶಾಲಾ ಮೇಧಾ ತಂಡವು ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿತು.

ಎರಡು ದಿನಗಳ ಸಾಂಸ್ಕೃತಿಕ ವೈಭವದಲ್ಲಿ ಎರಡು ಸಾವಿರದ ಐನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಜಿ ಎಮ್ ಗ್ಲೋಬಲ್ ಸ್ಕೂಲ್‌ನ ಆಡಳಿತ ನಿರ್ದೇಶಕ ಪ್ರಣವ್ ಶೆಟ್ಟಿ, ಡಾ. ವಿಜಯೇಂದ್ರ, ಶ್ರೀ ರಾಮ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಉಪಾಧ್ಯಕ್ಷೆ ರೇವತಿ ಕೆ, ಶ್ರೀಮಾ ಪ್ರಣವ್ ಶೆಟ್ಟಿ, ರಶ್ಮಿ ಕೃಷ್ಣಪ್ರಸಾದ್, ಶಶಿಧರ್ ಶೆಟ್ಟಿ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!