spot_img
Monday, March 9, 2026
spot_img

ಸಂವಿಧಾನದ ಆಶಯಕ್ಕೆ ಚ್ಯುತಿ ಬಾರದಂತೆ ಗ್ರಾ.ಪಂ.ಗಳು ಕಾರ್ಯನಿರ್ವಹಿಸಬೇಕು-ಶಾಸಕ ಗುರುರಾಜ ಗಂಟಿಹೊಳೆ

ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ
ಬೈಂದೂರು: ಸರಕಾರಿ ಕಛೇರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಕೇಂದ್ರಗಳಾಗಬೇಕು. ಜನಸೇವೆಯಲ್ಲಿ ಗ್ರಾಮ ಪಂಚಾಯತ್‌ಗಳು ಹೆಚ್ಚಿನ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರು ಕೂಡಾ ಗ್ರಾಮ ಪಂಚಾಯತ್ ನೊಂದಿಗೆ ಉತ್ತಮ ಬಾಂಧವ್ಯವಿರಿಸಿಕೊಂಡು ಗ್ರಾಮದ ಏಳ್ಗೆಯಲ್ಲಿ ಕೈಜೋಡಿಸಬೇಕು. ಗ್ರಾಮ ಪಂಚಾಯಿತಿಗಳು ಸಂವಿಧಾನದ ಆಶಯಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು.
ಅವರು ಶನಿವಾರ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನೂತನ ಕಚೇರಿ ಕಟ್ಟಡ ಸಭಾಭವನ, ಸಂಜೀವಿನಿ ಕಚೇರಿ, ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿ ಹಾಗೂ ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಇಡಿ ಗ್ರಾಮ ಪಂಚಾಯತ್ ನಿವಾಸಿಗಳಿಗೆ ಗ್ರಾಮದ ಮನೆ ಅಂದರೆ ಪಂಚಾಯತ್ ಕಟ್ಟಡ. ಅದೊಂದು ಭಾವನಾತ್ಮಕವಾದ ಕಟ್ಟಡ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಗ್ರಾಮ ಪಂಚಾಯತ್ ಪ್ರತಿನಿಧಿಗಳ ಗೌರವಧನ ಹೆಚ್ಚಳದ ವಿಷಯವನ್ನು ಈಗಾಗಲೇ ಹಲವಾರು ಬಾರಿ ಅಧಿವೇಶನದಲ್ಲಿ ಪ್ರಸ್ತಾವಿಸಿದ್ದೇನೆ. ಮುಂದೆಯೂ ಕೂಡಾ ಪಂಚಾಯತ್ ರಾಜ್ ಬಲವರ್ಧನೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸರಕಾರದ ಯೋಜನೆಗಳು ಶೇ.೧೦೦ರಷ್ಟು ಯಶಸ್ಸು ಕಾಣಬೇಕಾದರೆ ಪಂಚಾಯತ್ ಹಾಗೂ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದರು.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಗ್ರಾಮ ಪಂಚಾಯತ್ ಕಟ್ಟಡ., ಸಭಾಭವನ ಸಂಜೀವಿನಿ ಕಚೇರಿ, ಆಡಳಿತ ಅಧಿಕಾರಿ ಅವರ ಕಚೇರಿ, ಅರಿವು ಕೇಂದ್ರದ ಕಚೇರಿಯನ್ನು ಸುಸ್ಸಜಿತವಾಗಿ ನಿರ್ಮಿಸಿದ್ದೇವೆ, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಬೈಂದೂರು ಠಾಣಾಧಿಕಾರಿ ತಿಮ್ಮೇಶ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆ ಬಾಬು ಶೆಟ್ಟಿ, ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷ ಎಸ್ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಕಿರಿಮಂಜೇಶ್ವರ ಶ್ರೀ ಆಗಸ್ತೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಎನ್.ವಿ ಪ್ರಕಾಶ್ ಐತಾಳ್, ನಾಗೂರು ನೂರ್ ಜುಮ್ಮ ಮಸ್ಜಿದ್ ಅಧ್ಯಕ್ಷ ಎಂ.ಎಸ್ ಫಾರೂಕ್ ಸಾಹೇಬ್, ನಾಗೂರು ನೂರಿ ಸೀ ಫುಡ್ ಉದ್ಯಮಿ ಅಬ್ದುಲ್ ರೆಹಮಾನ, ಕಿರಿಮಂಜೇಶ್ವರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷೆ ಅನ್ನಪೂರ್ಣ ಉಡುಪ, ಉಪ್ಪುಂದ ಸುಮುಖ ಸರ್ಜಿಕಲ್ ಪ್ರೈವೇಟ್ ಲಿಮಿಟೆಡ್ ಬಿ.ಎಸ್ ಸುರೇಶ್ ಶೆಟ್ಟಿ, ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್ ರಾಜು ಪೂಜಾರಿ, ನಾಗೂರು ಸಾಗರ ಸಭಾಭವನ ಉದ್ಯಮಿ ಶೇಖರ್ ಪೂಜಾರಿ, ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಶೀಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರನ್ನು ಸಹಕರಿಸಿದವರನ್ನು ಸನ್ಮಾನಿಸಲಾಯಿತು. ತದನಂತರ ವೇದಿಕೆಯಲ್ಲಿ ಸಾಂಸ್ಕೃತಿಕ ವೈವಿಧ್ಯ ಹಾಗೂ ಯಕ್ಷಗಾನ ಕಾರ್ಯಕ್ರಮವು ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಸ್ವಾಗತಿಸಿ, ಉದಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!