spot_img
Friday, January 30, 2026
spot_img

ವಿಜಯ ಮಕ್ಕಳ ಕೂಟದ ವಿದ್ಯಾರ್ಥಿನಿಗೆ ಮುಖ್ಯಮಂತ್ರಿಯವರಿಂದ ಪ್ರಶಸ್ತಿ

ಕುಂದಾಪುರ: ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸೌಖ್ಯ ಆಚಾರ್ ಇವರು ಬಾಲ ಭವನ ಸೊಸೈಟಿ ಆಯೋಜಿಸಿರುವ ರಾಜ್ಯ ಮಟ್ಟದ ಸೃಜನಾತ್ಮಕ ಕಲೆಯಲ್ಲಿ ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.

ವಿಜಯ ಮಕ್ಕಳ ಕೂಟದ ಬಹುಮುಖ ಪ್ರತಿಭೆಯಾದ ಸೌಖ್ಯ ಆಚಾರ್ ಶಾಲೆಯ ಯಕ್ಷಗಾನ ಗುರುಗಳಾದ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರಿಂದ ಶಾಲೆಯಲ್ಲಿ ಯಕ್ಷಗಾನ ತರಬೇತಿ ಪಡೆಯುತ್ತಿದ್ದು, ಶಾಲಾ ವಾರ್ಷಿಕೋತ್ಸವದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ. ಈಕೆ ನೂಜಾಡಿ ಬಾಬು ಆಚಾರ್ ಮತ್ತು ಪ್ರೇಮ ಇವರ ಪುತ್ರಿ.

ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸೌಮ್ಯ ಆಚಾರ್ಯ ಅವರನ್ನು ವಿ‌ಎಂಕೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕವೃಂದ, ಬೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!