spot_img
Friday, January 30, 2026
spot_img

ಕುಂದಾಪುರ ತಾಲೂಕು ಮಟ್ಟದ ಜ್ಞಾನವಿಕಾಸ ಮಹಿಳಾ ಸಮಾವೇಶ, ವಿಚಾರಗೋಷ್ಠಿ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ,  ಹಾಗೂ ಒಂದು ಸಾವಿರ ಸದಸ್ಯರ ಸೇರ್ಪಡೆಯ ಕಾರ್ಯಕ್ರಮವನ್ನು ನಿವೇದಿತಾ ಪ್ರೌಢಶಾಲೆ ಬಸ್ರೂರು ಸಭಾಂಗಣದಲ್ಲಿ ನಡೆಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷ ಉಮೇಶ್ ಶೆಟ್ಟಿ, ಶ್ಯಾನ್ಕಟ್ಟು ಕಾರ್ಯಕ್ರಮ ಉದ್ಘಾಟಿಸಿದರು.

ಬಸ್ರೂರು ಗ್ರಾ.ಪಂ. ಅಧ್ಯಕ್ಷ ಬೇಳೂರು ದಿನಕರ ಶೆಟ್ಟಿ, ರಾಜೇಂದ್ರ ಕುಮಾರ್ ಬಸ್ರೂರು, ಅಶೋಕ್ ಕೆರೆಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಉಡುಪಿ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ ಅವರು ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಮಾತೃಶ್ರಿ ಹೇಮಾವತಿ ಅಮ್ಮನವರ ಮಹತ್ವಕಾಂಕ್ಷೆ ಯೋಜನೆ. ಎಲ್ಲಾ ಜ್ಞಾನ ವಿಕಾಸ ಕೇಂದ್ರಗಳನ್ನು ಉತ್ತಮವಾಗಿ ನಡೆಸಿಕೊಂಡು ಹೋಗಬೇಕು, ಸದಸ್ಯರ ಸೇರ್ಪಡೆ ,ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ಉತ್ತಮವಾಗಿ ನಡೆಸಿಕೊಂಡು ಹೋಗಬೇಕು ಎಂದರು. ತಾಲೂಕು ಯೋಜನಾಧಿಕಾರಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದ ಬಗ್ಗೆ,ಯೋಜನೆಯ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಕುಂದಾಪುರ ತಾಲೂಕಿನಲ್ಲಿ ೨೦೨೫- ೨೬ನೇ ಸಾಲಿನಲ್ಲಿ ಒಂದು ಸಾವಿರ ಸದಸ್ಯರ ಸೇರ್ಪಡೆ ಮಾಡಿದ ಸವಿನೆನಪಿಗಾಗಿ ಸಾಂಕೇತಿಕವಾಗಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಸೌಜನ್ಯ ಹಾಗೂ ಶಾಂತ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ ಇದರ ಆಡಳಿತ ಟ್ರಸ್ಟಿ ಅನುಪಮಾ ಎಸ್ ಶೆಟ್ಟಿ ವಹಿಸಿದ್ದರು.

ತಾಲೂಕಿನ ಸೇವಾ ಪ್ರತಿನಿಧಿಗಳು, ಬಸ್ರೂರು ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ ಸದಸ್ಯರು, ಜ್ಞಾನವಿಕಾಸ ಕೇಂದ್ರದ ಎಲ್ಲಾ ಸಂಯೋಜಕರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಓಂಕಾರ ಜ್ಞಾನವಿಕಾಸ ಕೇಂದ್ರದ ಸಂಗೀತ ಹಾಗೂ ಚಂಡಿಕಾಂಬ ಜ್ಞಾನವಿಕಾಸ ಕೇಂದ್ರದ ಸದಸ್ಯರಾದ ಕಾವೇರಿ ಅನಿಸಿಕೆ ವ್ಯಕ್ತಪಡಿಸಿದರು. ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ರಂಗೋಲಿ ಪುಷ್ಪಗುಚ್ಛ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಲಯದ ಮೇಲ್ವಿಚಾರಕಿ ಶಕುಂತಲಾ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ರೇಣುಕಾ ಕೋಡಪದವು ಕಾರ್ಯಕ್ರಮದ ವರದಿ ವಾಚಿಸಿದರು. ಸಾರಿಕಾ ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ಹಟ್ಟಿಯಂಗಡಿ ವಲಯದ ಸೇವಾ ಪ್ರತಿನಿಧಿ ಜ್ಯೋತಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!