spot_img
Monday, March 16, 2026
spot_img

ವಿಶೇಷ ಚೇತನರಿಗೆ ಪ್ರತ್ಯೇಕ ಅವಕಾಶದಿಂದ ಪ್ರತಿಭೆ ವಿಕಸನ-ಶಾಸಕ ಕಿರಣ್ ಕೊಡ್ಗಿ

ಕುಂದಾಪುರ: ಗಾಂಧಿ ಮೈದಾನದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಉಡುಪಿ,, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯತ್ ಕುಂದಾಪುರ ಬೈಂದೂರು, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪುರಸಭೆ ಕುಂದಾಪುರ, ಪಟ್ಟಣ ಪಂಚಾಯತ್ ಬೈಂದೂರು, ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಕುಂದಾಪುರ,, ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಕುಂದಾಪುರ ಮತ್ತು ಬೈಂದೂರು ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಸಹಯೋಗದಲ್ಲಿ ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಭೆ ಇದ್ದರೂ ವಿಶೇಷ ಚೇತನರಿಗೆ ಹೆಚ್ಚಾಗಿ ಅವಕಾಶಗಳು ಸಿಗುವುದಿಲ್ಲ. ಅವರಿಗೆ ಪ್ರತ್ಯೇಕವಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಪ್ರತಿಭೆ ಹೊರಹೊಮ್ಮಲು ಸಹಕಾರಿಯಾಗುತ್ತದೆ’ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಹೇಶ್ ಜಿ., ಬೈಂದೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಮದಾಸ್, ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಎಲ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ, ಯುವಜನ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಚೈತನ್ಯ ವೃದ್ದಾಶ್ರಮ ಟ್ರಸ್ಟ್ ಅಧ್ಯಕ್ಷೆ ಸಿಸಿಲಿ ಕೋಟ್ಯಾನ್, ವಿವಿಧ ಇಲಾಖೆಯ ಅಧಿಕಾರಿಗಳು, ಉಪಸ್ಥಿತರಿದ್ದರು.

ವಾಗ್ಜ್ಯೋತಿ ವಿಶೇಷ ಮಕ್ಕಳ ಶಾಲೆ ಅಂಪಾರು ಇಲ್ಲಿನ ಮುಖ್ಯೋಪಾಧ್ಯಾಯರಾದ ರವೀಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಆಕಾಶ್ ಶೆಟ್ಟಿ ಅಂಪಾರು ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!