spot_img
Monday, March 9, 2026
spot_img

ಡಿ.6ರಂದು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವ್ಯವಹಾರ ಮೇಳ

 

ಕುಂದಾಪುರ : ಡಿಸೆಂಬರ್ 6 ರಂದು ವಿ-ವಿಸ್ತಾರ 2k25 ಎನ್ನುವ ಶೀರ್ಷಿಕೆಯಡಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರ ವರೆಗೆ Business Day ಕಾರ್ಯಕ್ರಮ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸುಪ್ರಭಾತ ಗ್ರೂಪ್ ಆಫ್ ಹೋಟೇಲ್ಸ್ ಹೈದ್ರಾಬಾದ್ ಇದರ ಪ್ರವರ್ತಕರಾದ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಲಿದ್ದಾರೆ. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಅಧ್ಯಕ್ಷರಾದ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೈಗಾರಿಕೋದ್ಯಮಿ ಹಾಗೂ ಸಾಮಾಜಿಕ ಮುಖಂಡರಾದ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಕಾರ್ಕಳ ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, ಕೋಶಾಧಿಕಾರಿ ಕೆ.ಲಕ್ಷ್ಮೀನಾರಾಯಣ ಶೆಣೈ ವೇದಿಕೆಯಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಹಾಗೂ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿರುವರು.

ಈ ಶುಭ ಸಂದರ್ಭದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಮುರಳಿ ಕಡೆಕಾರ್ (ಸಮಾಜ ಸೇವೆ) ಬಿ. ವಿಶ್ವೇಶ್ವರ ಅಡಿಗ (ಶಿಕ್ಷಣ ಕ್ಷೇತ್ರ ) ಮಹಾಬಲ ದೇವಾಡಿಗ ಕಮಲಶಿಲೆ ( ಯಕ್ಷಗಾನ ) ಶ್ರೀ ಗಣಪತಿ ಖಾರ್ವಿ ( ಮಾಜಿ ಸೈನಿಕ ) ಗೌತಮ್ ಶೆಟ್ಟಿ ( ಕೃಷಿಕರು) ಇವರನ್ನು ಸನ್ಮಾನಿಸಲಾಗುವುದು.

ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಲ್ಲಿ ವ್ಯವಹಾರ ಕೌಶಲ್ಯದ ಅರಿವು ಮೂಡಿಸುವ ನಿಟ್ಟಿನಲ್ಲಿ ಆರಂಭಿಸಿದ ವ್ಯವಹಾರ ದಿನ ಅದ್ಭುತ ಯಶಸ್ಸು ಪಡೆದುಕೊಂಡು ಇದೀಗ ಪಂಚಮ ವರ್ಷದ ವ್ಯವಹಾರ ದಿನಕ್ಕೆ ಕಾಲೇಜು ಸಿದ್ಧವಾಗಿದೆ. ಈ ಬಾರಿ ೬೦ ಕ್ಕೂ ಅಧಿಕ ವೈವಿಧ್ಯಮಯ ಮಳಿಗೆಗಳನ್ನು ವಿದ್ಯಾರ್ಥಿಗಳು ತೆರೆಯಲಿದ್ದಾರೆ.

ವಿದ್ಯಾರ್ಥಿಗಳಿಗೆ ಶಿಕ್ಷಣ ಜ್ಯೋತಿಯೊಂದಿಗೆ ಸದೃಢ ಸಮಾಜ ನಿರ್ಮಾಣವಾಗಬೇಕು ಎನ್ನುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವ್ಯವಹಾರ ಮೇಳದ ಮೂಲಕ ವ್ಯವಹಾರ ಕೌಶಲ್ಯತೆ, ಉದ್ಯಮಶೀಲತೆ, ಆತ್ಮವಿಶ್ವಾಸ, ಮಾರುಕಟ್ಟೆ ಪರಿಚಯ, ಸವಾಲುಗಳ ಬಗ್ಗೆ ಅರಿವಾಗುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಕುಂದಾಪುರ ತಾಲೂಕಿನಲ್ಲಿರುವ ವಿವಿಧ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸುತ್ತಿರುವುದರಿಂದ ಸುಮಾರು 10 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ವಿದ್ಯಾರ್ಥಿಗಳ ನವ ನವೀನತೆಯ ಪ್ರಯತ್ನಕ್ಕೆ ವಿದ್ಯಾಭಿಮಾನಿಗಳು ಭಾಗವಹಿಸಿ, ಪ್ರೋತ್ಸಾಹಿಸುವಂತೆ ಕಾಲೇಜಿನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!