spot_img
Monday, March 9, 2026
spot_img

ಬಿ. ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

ಕುಂದಾಪುರ : ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು.
ಕ್ರೀಡಾಪಟು ಸಮಯ ನಿರ್ವಹಣೆ, ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡರೆ ಯಶಸ್ಸು ಸಾಧ್ಯ ಎಂದು ಜನತಾ
ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ  ಕೃಷ್ಣ ಮೊಗವೀರ ಹೇಳಿದರು.

ಅವರು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ
ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ.
ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ಟಿ. ಎನ್. ಉಪಸ್ಥಿತರಿದ್ದರು. ವಾಣಿಜ್ಯ
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪೂಜಾ ಕುಂದರ್ ಕಾರ್ಯಕ್ರಮ ನಿರೂಪಿಸಿ, ಸತೀಶ್ ಶೆಟ್ಟಿ ಹೆಸ್ಕತ್ತೂರು
ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ಪ್ರಥಮ ಬಿ.ಕಾಂ. (ಬಿ) ವಿಭಾಗದ ಪ್ರತೀಕ್ಷಾ ಶೆಟ್ಟಿ, ದ್ವಿತೀಯ ಬಿಸಿಎ ವಿಭಾಗದ ರೋಹನ್ ಆರ್. ನಾಯ್ಕ್
ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ. ಸಮಗ್ರ ವಿಭಾಗದಲ್ಲಿ ತೃತೀಯ ಬಿಸಿಎ (ಬಿ) ವಿಭಾಗ ಪ್ರಥಮ, ತೃತೀಯ ಬಿ.ಕಾಂ.
(ಬಿ) ವಿಭಾಗ ದ್ವಿತೀಯ ಹಾಗೂ ಪ್ರಥಮ ಬಿ.ಕಾಂ. (ಬಿ) ವಿಭಾಗ ತೃತೀಯ ಸ್ಥಾನವನ್ನು ಪಡೆದರು. ಬೆಳಿಗ್ಗೆ ನಡೆದ
ಪಥ ಸಂಚಲನದಲ್ಲಿ ದ್ವಿತೀಯ ಬಿ.ಕಾಂ. (ಬಿ) ಪ್ರಥಮ, ತೃತೀಯ ಬಿ.ಕಾಂ. (ಇ) ದ್ವಿತೀಯ ಹಾಗೂ ತೃತೀಯ ಬಿಬಿಎ
ತೃತೀಯ ಸ್ಥಾನವನ್ನು ಪಡೆದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!