spot_img
Monday, March 9, 2026
spot_img

ಗ್ರಾಮಗಳ ಪ್ರಗತಿಯಿಂದಲೇ ದೇಶದ ಪ್ರಗತಿ-ಮಂಜುನಾಥ ಭಂಡಾರಿ | ಆಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಕುಂದಾಪುರ: ಇಚ್ಛಾಶಕ್ತಿಯೊಂದು ಇದ್ದರೆ ಯಾವುದೇ ಸಾಧನೆಯನ್ನು ಮಾಡಲು ಸಾಧ್ಯವಿದೆ. ಮಹಾತ್ಮ ಗಾಂಧಿಜಿ ಕಂಡ ಗ್ರಾಮಸ್ವರಾಜ್ಯದ ಕನಸನ್ನು ಗ್ರಾಮ ಪಂಚಾಯಿತಿಗಳ ಮೂಲಕ ನನಸಾಗಬೇಕು. ಹಳ್ಳಿಗಳಿಂದ ಕೂಡಿದಂತಹ ದೇಶ ಹಳ್ಳಿಗಳಿಂದಲೇ ಅಭಿವೃದ್ಧಿ ಬದಲಾವಣೆಗಳು ಆಗಬೇಕು. ಗ್ರಾಮ ಮಟ್ಟದಿಂದ ಆಗುವ ಪರಿವರ್ತನೆ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ. ಆ ಹಿನ್ನೆಲೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳು ಉತ್ತಮ ಕಟ್ಟಡದೊಂದಿಗೆ ಉತ್ತಮ ಆಡಳಿತ ನೀಡಬೇಕು. ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಕಟ್ಟಡಗಳ ಮುಖ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಅವರು ಕುಂದಾಪುರ ತಾಲೂಕು ಆಲೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಭೂಮಿ ಕಬಳಿಕೆಯ ನಡುವೆ ಆಲೂರು ಗ್ರಾಮ ಪಂಚಾಯತಿ ಅಭಿವೃದ್ಧಿ ವಿಚಾರದಲ್ಲಿ ೪೦ ಎಕರೆ ಸ್ಥಳವನ್ನು ಗುರುತಿಸಿ ಇಟ್ಟಿರುವುದು ಅಭಿನಂದನಾರ್ಹ. ಹಳ್ಳಿಗಳು ಸುತ್ತುವರಿದ ಆಲೂರು ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಯೋಜನೆ ಕೂಡಾ ಸ್ವಾಗತಾರ್ಹವಾಗಿದ್ದು ೫ಲಕ್ಷ ಅನುದಾನ ನೀಡುತ್ತೇನೆ. ಜೊತೆಯಲ್ಲಿ ಯುವಜನ ಕ್ರೀಡಾ‌ಇಲಾಖೆಯಿಂದ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಯತ್ನಿಸುತ್ತೇನೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರು ರಾಜಕೀಯ ಹೊರತು ಪಡಿಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ಆಗ ಗ್ರಾಮಸ್ಥರಿಗೆ ವಿಶ್ವಾಸ ಬರುತ್ತದೆ. ಆಲೂರು ಗ್ರಾಮದಲ್ಲಿ ಪಂಚಾಯತ್ ಕಟ್ಟಡ ಉದ್ಘಾಟನೆಗೆ ಸೇರಿರುವ ಜನಸ್ತೋಮ ನೋಡಿದರೆ ಇಲ್ಲಿನ ಜನರು ಪಂಚಾಯತ್ ಮೇಲೆ ಇಟ್ಟಿರುವ ಅಭಿಮಾನ ಅರ್ಥವಾಗುತ್ತದೆ ಎಂದರು.

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ, ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಹೆಚ್.ಮಂಜಯ್ಯ ಶೆಟ್ಟಿ, ಜಿ.ಪಂ ಮಾಜಿ ಸದಸ್ಯೆ ಇಂದಿರಾ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೇಶ ಎನ್.ದೇವಾಡಿಗ,ಉಪಾಧ್ಯಕ್ಷೆ ಸಿಂಗಾರಿ, ಕಾರ್ಯದರ್ಶಿ ವಾಸು ನಾಯ್ಕ, ಕಟ್ಟಡ ರಚನಾ ಸಮಿತಿ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ,ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗುಂಡು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೂಪ ಗೋಪಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಉದಯ ಕುಮಾರ್ ಆಲೂರು ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಬಳಿಕ ದಕ್ಷಿಣೋತ್ತರ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಜನ್ಸಾಲೆ ರಾಘವೇಂದ್ರ ಆಚಾರ್ಯರ ಹಿಮ್ಮೇಳದಲ್ಲಿ ಅಂಬಾ ಶಪಥ ಯಕ್ಷಗಾನ ಪ್ರದರ್ಶನ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!