spot_img
Monday, March 9, 2026
spot_img

ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು: ಶಿಶುವಿಹಾರದಲ್ಲಿ ಪತ್ರ ಬರವಣಿಗೆ ದಿನಾಚರಣೆ

ಕುಂದಾಪುರ: ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು ಇಲ್ಲಿನ ಶಿಶುವಿಹಾರ (ಕಿಂಡರ್ ಗಾರ್ಟನ್) ವಿಭಾಗದಲ್ಲಿ ಡಿ.5 ರಂದು ಪತ್ರ ಬರವಣಿಗೆ ದಿನವನ್ನು ಬಹಳ ವಿಶಿಷ್ಟವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಪುಟ್ಟ ಮಕ್ಕಳು ಈ ಚಟುವಟಿಕೆಯಲ್ಲಿ ಅಪಾರ ಉತ್ಸಾಹ ಮತ್ತು ಪ್ರೀತಿಯಿಂದ ಪಾಲ್ಗೊಂಡರು.

ಈ ವಿಶೇಷ ದಿನದಂದು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಇವರು ಉಪಸ್ಥಿತರಿದ್ದು, ಈ ತಂತ್ರಜ್ಞಾನ ಯುಗದಲ್ಲಿ ಪತ್ರ ಬರವಣಿಗೆ ಮಹತ್ವ ತಿಳಿಸುವ ಕಾರ್ಯವನ್ನು ಪ್ರಶಂಸಿಸಿದರು. ಆಡಳಿತಾಧಿಕಾರಿ ಚೈತ್ರ ಯಡಿಯಾಳ ಉಪಸ್ಥಿತರಿದ್ದರು.

ಕಿಂಡರ್ಗಾರ್ಟನ್ ವಿಭಾಗದ ಶಿಕ್ಷಕಿಯರಾದ ಶೋಭಾ ಮತ್ತು ಶ್ವೇತಾ ಶೇಟ್ ಇವರು ಪುಟಾಣಿಗಳಿಗೆ ಪತ್ರದ ಮಹತ್ವ ಮತ್ತು ಬರೆಯುವ ವಿಧಾನದ ಬಗ್ಗೆ ಸರಳವಾಗಿ ತಿಳಿಸಿಕೊಟ್ಟರು. ನಂತರ, ಮಕ್ಕಳು ತಮ್ಮ ಪಾಲಕರಿಗೆ (ಅಪ್ಪ-ಅಮ್ಮನಿಗೆ) ತಮ್ಮ ಮನಸ್ಸಿನ ಭಾವನೆಗಳನ್ನು, ಪ್ರೀತಿಯ ಮಾತುಗಳನ್ನು ಅಂಚೆ ಕಾರ್ಡ್ ಮೇಲೆ ಬರೆಯಲು ಪ್ರಯತ್ನಿಸಿದರು. ಚಿತ್ರ ಬಿಡಿಸಿದರು.

ಕೇವಲ ಪತ್ರ ಬರೆದು ಮುಗಿಸದೆ, ಈ ಸಂಪೂರ್ಣ ಪ್ರಕ್ರಿಯೆಯ ಪ್ರಾಯೋಗಿಕ ಅನುಭವ ನೀಡಲು ಮಕ್ಕಳಿಗೆ ಸ್ಥಳೀಯ ಅಂಚೆ ಕಚೇರಿಗೆ ಭೇಟಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ಅಂಪಾರಿನ ಅಂಚೆ ಕಚೇರಿಗೆ ತೆರಳಿ, ಅಲ್ಲಿ ಅಂಚೆ ಕಚೇರಿಯ ಕಾರ್ಯವೈಖರಿಯ ಬಗ್ಗೆ ಪೋಸ್ಟ್ ಮಾಸ್ಟರ್ ಅನಂತ ಪದ್ಮನಾಭ ಪ್ರಭು ಇವರಿಂದ ತಿಳಿದುಕೊಂಡರು. ನಂತರ ಸ್ವತಃ ತಮ್ಮ ಪುಟ್ಟ ಕೈಗಳಿಂದ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ (ಪೋಸ್ಟ್‌ಬಾಕ್ಸ್) ಹಾಕಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!