spot_img
Monday, March 9, 2026
spot_img

ಡಿ.10ಕ್ಕೆ ಬಸ್ರೂರು ನಿವೇದಿತಾ ಪ್ರೌಢಶಾಲೆ ವಾರ್ಷಿಕೋತ್ಸವ

ಕುಂದಾಪುರ: ಹಿಂದೂ ಸ್ಕೂಲ್ ಎಸೋಸಿಯೇಶನ್ ರಿ., ಬಸ್ರೂರು ಇದರ ಹಿಂದೂ ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ನಿವೇದಿತಾ ಪ್ರೌಢಶಾಲೆ ಬಸ್ರೂರು ಇದರ ೨೦೨೫-೨೬ನೇ ಸಾಲಿನ ವಾರ್ಷಿಕೋತ್ಸವ ಡಿ.10 ಬುಧವಾರ ಅಪರಾಹ್ನ 2.30ಕ್ಕೆ ನಡೆಯಲಿದೆ.

ಹಿಂದೂ ಸ್ಕೂಲ್ ಎಸೋಸಿಯೇಶನ್ ಸಂಚಾಲಕ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ. ಅಧ್ಯಕ್ಷ ಬೇಳೂರು ದಿನಕರ ಶೆಟ್ಟಿ, ಹಿಂದೂ ಸ್ಕೂಲ್ ಎಸೋಸಿಯೇಶನ್ ಆಡಳಿತ ಮಂಡಳಿ ಸದಸ್ಯ ರಾಮ್ ಕಿಶನ್ ಹೆಗ್ಡೆ, ಅನುಪಮ ಎಸ್.ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಬಸ್ರೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಶೀನ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನಂದಿ ಡೆಂಟಲ್ ಕ್ಲಿನಿಕ್ ಕೋಟೇಶ್ವರ ಇದರ ಡಾ.ಆದರ್ಶ್ ವಿ.ಹೆಗ್ಡೆ ಸ್ವಸ್ತಿ ವಾಚನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕ ಸ್ಟೀವನ್‌ಸನ್ ರೊಡ್ರಿಗಸ್, ಮಂಜುನಾಥ ಕೆ.ಎಸ್.,ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪುರಸ್ಕೃತ ಪ್ರದೀಪ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ರಾಜ್ಯ ಮಟ್ಟದ ಕುಸ್ತಿಪಟು ಗಣೇಶ ಬಸಪ್ಪ ಹಲಗಲಿ, ರಾಜ್ಯಮಟ್ಟದ ಕುಸ್ತಿಪಟು ಭುವನ್ ಶ್ಯಾನುಭಾಗ್, ಎತ್ತರ ಜಿಗಿತ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಲೌಕಿಕ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಬಳಿಕ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!