spot_img
Friday, January 30, 2026
spot_img

ಮೂಡ್ಲಕಟ್ಟೆ: ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು ‘

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ದಿನಾಂಕ 5 ಡಿಸೆಂಬರ್ 2025 ರಂದು ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು ‘ ಎಂಬ ವಿಷಯದ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ರಮಣಿ ವೆಂಕಟ್, ಸೇಲ್ಸ್ ಸ್ಟ್ರೈಟೆಜಿಕ್ ಕನ್ಸಲ್ಟೆಂಟ್ ಅಂಡ್ ಮೆಂಟರ್ ಟು ಸ್ಟಾರ್ಟ್ ಅಪ್ ಆಗಮಿಸಿ ಎಲ್ಲಾ ವಿದ್ಯಾರ್ಥಿಗಳಲ್ಲಿಯೂ ಒಬ್ಬೊಬ್ಬ ಸೂಪರ್ ಹೀರೋ ಇರುತ್ತಾನೆ. ಆದರೆ ಅದು ವಿದ್ಯಾರ್ಥಿಗಳಿಗೆ ತಿಳಿಯದೆ ನಾವು ಯಾರಿಗೂ ಸಮರಲ್ಲ ಎಂಬ ಋಣಾತ್ಮಕ ಆಲೋಚನೆಯಲ್ಲಿ ವಿದ್ಯಾರ್ಥಿಗಳು ಇರುತ್ತಾರೆ. ಇವರು ವಿದ್ಯಾರ್ಥಿಗಳಿಗೆ ವಿವಿಧ ನೈಜ ಅನುಭವಗಳನ್ನು ನೀಡುವುದರ ಮೂಲಕ ಅದಕ್ಕೆ ಹೇಗೆ ಪ್ರತಿಕ್ರಿಸುತ್ತಾರೆ ಮತ್ತು ವಿದ್ಯಾರ್ಥಿಗಳು ಮಾಡುವ ತಪ್ಪುಗಳೇನು ಮತ್ತು ಅದನ್ನು ಹೇಗೆ ಸರಿಪಡಿಸಿಕೊಳ್ಳಬೇಕೆಂದು ತಿಳಿಸಿದರು. ಈ ಕಾರ್ಯಗಾರವನ್ನು ಕಾಲೇಜಿನ ಡೈರೆಕ್ಟರ್ ಅಕಾಡೆಮಿಕ್ಸ್ ಡಾಕ್ಟರ್ ಎಸ್ ಎನ್ ಭಟ್ ಇವರು ಉದ್ಘಾಟಿಸಿ ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಈ ಕಾರ್ಯಗಾರದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ವಿದ್ಯಾರ್ಥಿಗಳು ಮುಂಜಾನೆ ಯಿಂದ ಮುಸ್ಸಂಜೆವರೆಗೆ ಉತ್ಸಾಹದಿಂದ ಭಾಗವಹಿಸಿದ್ದನ್ನು ನೋಡಿ ಪ್ರಶಂಸಿಸಿದರು. ಈ ಕಾರ್ಯಗಾರದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಕುಮಾರಿ ಶಾಂಭವಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!