spot_img
Monday, March 9, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ನರ್ಸರಿ ವಿಭಾಗದ ವಾರ್ಷಿಕೋತ್ಸವ

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವವು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ರವರ ಅಧ್ಯಕ್ಷತೆಯಲ್ಲಿ ಡಿ.8ರಂದು ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ನಿವೃತ್ತ ಆಂಗ್ಲಭಾಷಾ ಉಪನ್ಯಾಸಕಿ, ಸಾಹಿತಿ ಡಾ| ಪಾರ್ವತಿ ಜಿ. ಐತಾಳ್ ಅವರು ಭಾಗವಹಿಸಿ, ಹೆತ್ತವರು ತಮ್ಮ ಮಗುವಿಗೆ ಸ್ವಲ್ಪ ಸಮಯವನ್ನು ಮೀಸಲಿಟ್ಟು ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಅಡಿಗ, ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ರೇಶ್ಮಾ ಡಿಸೋಜ ಉಪಸ್ಥಿತರಿದ್ದರು.

ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ ಸೋಜಾ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಅಮೂಲ್ಯ ನಾಯಕ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಯುವಿಕಾ ಬಂಗೇರ ಸ್ವಾಗತಿಸಿದರು. ಅಕ್ಷರಾ ಅತಿಥಿಗಳನ್ನು ಪರಿಚಯಿಸಿದರು. ಅಹನಾ ಜೆ. ಆಚಾರ್ಯ ಹಾಗೂ ರಿಷಭ್ ಆರ್.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ಆರಾಧ್ಯ ನಾರಾಯಣ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!