spot_img
Monday, March 9, 2026
spot_img

ಕಾರ್ಮಿಕ ರಾಜ್ಯ ವಿಮಾ ಯೋಜನೆ: ಒಡಂಬಡಿಕೆ ನವೀಕರಣಕ್ಕೆ ಶಾಸಕ ಕಿರಣ್ ಕೊಡ್ಗಿ ಸಚಿವರಿಗೆ ಮನವಿ

ಬೆಂಗಳೂರು: ಕಾರ್ಮಿಕ ರಾಜ್ಯ ವಿಮಾ ಯೋಜನೆ ಸೇವೆಗಳ ಇಲಾಖೆ ಮತ್ತು ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಒಡಂಬಡಿಕೆ (ಟೈ ಅಪ್) ಯನ್ನು ನವೀಕರಿಸಿ ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾರ್ಮಿಕರ ರಾಜ್ಯ ವಿಮಾ ಚಿಕಿತ್ಸೆ ಒದಗಿಸಲು ಮಾಡಿಕೊಂಡ ಒಡಂಬಡಿಕೆಯ ಕಾ.ರಾ.ವಿ.ಯೋ (ವೈ) ಸೇವೆಗಳ ಇಲಾಖೆ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಅವಧಿಯು ಈಗಾಗಲೇ ಡಿ.7-2025 ಮುಕ್ತಾಯಗೊಂಡಿರುವುದರಿಂದ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಒಡಂಬಡಿಕೆ ನವೀಕರಣ ಆಗದ ಕಾರಣಕ್ಕಾಗಿ ಚಿಕಿತ್ಸೆ ನಿರಾಕರಿಸುತ್ತಿರುವುದರಿಂದ ವಿಮಾ ಅರ್ಹ ರೋಗಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದುದರಿಂದ ಕೂಡಲೇ ಕಾರ್ಮಿಕ ರಾಜ್ಯ ವಿಮಾ ಯೋಜನೆ ಸೇವೆಗಳ ಇಲಾಖೆ ಮತ್ತು ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಒಡಂಬಡಿಕೆಯನ್ನು ನವೀಕರಿಸಿ ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆಯನ್ನು ಕ್ಲಪ್ತ ಸಮಯದಲ್ಲಿ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!