spot_img
Friday, January 30, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ | ತಂದೆ ತಾಯಿಯ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನವಿರಲಿ – ಡಾ. ಸುಧಾಕರ ಶೆಟ್ಟಿ.

ಕುಂದಾಪುರ: ವಿಶೇಷವಾದ ಶಿಕ್ಷಣದ ಕಾಲಘಟ್ಟದಲ್ಲಿ ವಿದ್ಯಾರ್ಜನೆಗೈಯುತ್ತಿರುವ ವಿದ್ಯಾರ್ಥಿಗಳು ವಯೋಸಹಜ ವಾದ ಆಸೆ ಆಕಾಂಕ್ಷೆಗಳಿಗೆ ಕಡಿವಾಣ ಹಾಕಿ ತಂದೆ ತಾಯಿಯ ಶ್ರಮ ವನ್ನು ನೆನಪಿಸಿಕೊಂಡು ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನ ವಿರಲಿ ಎಂದು ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನಲ್ ಟ್ರಸ್ಟ್ ಹಾಗೂ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಹೇಳಿದರು.

ಅವರು ಡಿ.೯ರಂದು ನಡೆದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು.
ವಿದ್ಯಾರ್ಥಿಗಳಾದ ಬ್ರೆಂಡನ್ ಅತಿಥಿಯನ್ನು ಪರಿಚಯಿಸಿದರು. ಅದಿತಿ ವಂದಿಸಿ, ಫಾತಿಮಾ ತೈಭಾ ಸ್ವಾಗತಿಸಿ, ಕೆ. ಶ್ರೀನಿತಾ ಎಸ್. ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!