spot_img
Wednesday, March 4, 2026
spot_img

ಕಟ್ಟಡ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಿದ ಕುಂದಾಪುರ ಶಾಸಕ ಎ.ಕಿರಣ್ ಕೊಡ್ಗಿ

ಬೆಂಗಳೂರು: ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರ ಗುರುತಿನ ಚೀಟಿ ನೋಂದಾವಣಿಗೆ ತಾಂತ್ರಿಕ ದೋಷದ ಕಾರಣ ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಭೇಟಿಯಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹೊಸದಾಗಿ ರೂಪುಗೊಂಡ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಕೆಲವು ದಿನಗಳಿಂದ ತೊಂದರೆಯಾಗುತ್ತಿದ್ದು ಇದರಿಂದಾಗಿ ಕಾರ್ಮಿಕರಿಗೆ ಹೊಸದಾಗಿ ಗುರುತಿನ ಚೀಟಿಯನ್ನು ನೋಂದಾವಣೆ ಮಾಡಲು ಮತ್ತು ಸರಕಾರದಿಂದ ಸಿಗುವ ಸೌಲಭ್ಯ ಹಾಗೂ ಸಹಾಯಧನದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಮರು ನೋಂದಾವಣೆ ಮಾಡಿರುವ ಗುರುತಿನ ಚೀಟಿಯನ್ನು ಇ-ಕಾರ್ಡ್ ಮಾಡಲು ಹಾಗೂ ಮರು ನೋಂದಾವಣಿ ಆಗಿರುವ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಿದಾಗ ಕುಟುಂಬ ಸದಸ್ಯರ ಹೆಸರುಗಳು ಬೇರೆಯಾಗಿ ಬರುತ್ತಿದ್ದು ಇದರಿಂದಾಗಿ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು ಆದುದರಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಗುರುತಿನ ಚೀಟಿ ನೊಂದಾವಣಿ ಹಾಗೂ ಇತರೆ ಪ್ರಕ್ರಿಯೆಯನ್ನು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಗುತ್ತಿರುವ ತಾಂತ್ರಿಕ ದೋಷವನ್ನು ಸರಿಪಡಿಸುವ ಬಗ್ಗೆ ಶಾಸಕರು ಸಚಿವರೊಂದಿಗೆ ಚರ್ಚಿಸಿದರು.

ಇ ಪೋರ್ಟಲ್ ನಲ್ಲಿ ಆಗುತ್ತಿರುವ ಸಮಸ್ಯೆಯನ್ನು ತಿಳಿಸಿದ್ದು ಸಚಿವರು, ತಕ್ಷಣ ಸರಿಪಡಿಸುವಂತೆ ಸಂಬಂಧ ಪಟ್ಟ ಇಲಾಖೆಗೆ ಸೂಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!