spot_img
Wednesday, March 4, 2026
spot_img

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ  ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ

ಮಂಗಳೂರು : ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಮೊದಲ ಬಾರಿ ನೀಡಿದ ಪ್ರತಿಷ್ಠಿತ   ‘ಸಹಕಾರಿ ಸಾರ್ವಭೌಮ’ ಪ್ರಶಸ್ತಿ  ಹಾಗೂ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾದ ಪ್ರತಿಷ್ಠಿತ  ‘ ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ ‘ ಯನ್ನು ಸ್ವೀಕರಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ..ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ  ಸನ್ಮಾನಿಸಲಾಯಿತು.

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ  ಅಭಿವೃದ್ಧಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನವನ್ನು ಸಂಘದ ಅಧ್ಯಕ್ಷರಾದ ನವೀನ್ ಅಡ್ಯಂತಾಯ  ಅವರು ಸ್ಮರಿಸಿ, ಸಂಘದ ಆಡಳಿತ ಮಂಡಳಿಯ ನಿರ್ದೇಶಕರೊಂದಿಗೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಿ, ಅವರಿಗೆ  ಇನ್ನಷ್ಟೂ ಉನ್ನತ ಪ್ರಶಸ್ತಿಗಳು ಬರಲಿ ಎನ್ನುವುದೇ ಸಹಕಾರಿಗಳೆಲ್ಲರ ಅಭಿಲಾಶೆ ಎಂದರು.

ಈ ಸಂದರ್ಭದಲ್ಲಿ  ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್. , ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ  ಉಪಾಧ್ಯಕ್ಷರಾದ ಬೆಳಂಜೆ ಹರೀಶ್ ಪೂಜಾರಿ, ನಿರ್ದೇಶಕರಾದ ಪುಟ್ಟಣ್ಣ ಭಟ್ , ರಾಘವೇಂದ್ರ ನಾಯ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೀನ ನಾಯ್ಕ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!