spot_img
Tuesday, March 3, 2026
spot_img

ಕಾಳಾವರ ವರದರಾಜ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ 

ಕೋಟೇಶ್ವರ: ಮಾನವನು ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಈ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರೋಹಿಣಿ ಯವರು ಹೇಳಿದರು.
ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಐ ಕ್ಯೂ ಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
 ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು ಹಾಗೂ ಅಧ್ಯಕ್ಷತೆ ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕ ನಾಗರಾಜ ಯು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ  ಗಣೇಶ್ ಪೈ ಎಂ. ಪ್ರಸ್ತಾವಿಸಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ಭಾಗೀರಥಿ ನಾಯ್ಕ ವಂದಿಸಿದರು. ನಾಗಮ್ಮ ಅಂತಿಮ ಬಿ ಎ ಪ್ರಾರ್ಥಿಸಿ, ಕೃತಿಕಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!