spot_img
Monday, January 19, 2026
spot_img

ಆತ್ಮವಿಶ್ವಾಸವೇ ಗೆಲುವಿನ ಗುಟ್ಟು-ಸತೀಶ್ ಆಚಾರ್ಯ ಉಳ್ಳೂರು

ಶಂಕರನಾರಾಯಣ: ತರಬೇತಿ ಒಂದು ಮಾರ್ಗದರ್ಶನ ಮಾತ್ರ, ಅದರ ಅಂತಿಮ ಸಾಧನೆ ವಿದ್ಯಾರ್ಥಿಗಳ ಸ್ವೀಕಾರ ಮತ್ತು ಪ್ರಯತ್ನದ ಮೇಲೆ ಅವಲಂಬಿತವಾಗಿದೆ. ವಿದ್ಯಾರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಜ್ಞಾನ, ಕೌಶಲ್ಯ ಮತ್ತು ಅನುಭವಗಳನ್ನು ತಮ್ಮ ಜೀವನದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು. ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ್ಯ ಮತ್ತು ಉದ್ಯೋಗ ಪಡೆಯುವ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಉದಯವಾಣಿ ಪತ್ರಕರ್ತ ಸತೀಶ್ ಆಚಾರ್ಯ ಉಳ್ಳೂರು ಹೇಳಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದ ಆಂತರಿಕ ಗುಣಮಟ್ಟ ಭರವಸಾ ಕೋಶ, ವೃತ್ತಿ ಮಾರ್ಗದರ್ಶನ ಮತ್ತು ಪ್ಲೇಸ್ಮೆಂಟ್ ವಿಭಾಗ ಹಾಗೂ ಬೆಂಗಳೂರಿನ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಅವರ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ವಾರದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭದ ಮುಖ್ಯ ಅತಿಥಿ ಶ್ರೀ ವೀರ ಕಲ್ಲುಕುಟಿಕ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಮನೋಜ್ ಶೇಟ್ ಮಾತನಾಡಿ ವಿದ್ಯಾರ್ಥಿಗಳು ಈ ರೀತಿಯ ವೇದಿಕೆಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಾಮರ್ಥ್ಯವನ್ನು ಬೆಳೆಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅವರು, ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಹೇಗೆ ಸಹಕಾರಿಯಾಗುತ್ತವೆ ಹಾಗೂ ಅವರ ಭವಿಷ್ಯವನ್ನು ರೂಪಿಸುವಲ್ಲಿ ಯಾವ ರೀತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹ ಸಂಚಾಲಕಿ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ. ನಳಿನಶ್ರೀ ಆರ್ ಎನ್ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ನ ಆಕಾಶ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಜಿತೇಂದ್ರ ಪ್ರಾರ್ಥಿಸಿದರು, ಸುದರ್ಶನ್ ವಂದಿಸಿದರು. ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!