spot_img
Monday, March 16, 2026
spot_img

ಮಾರಣಕಟ್ಟೆಯಲ್ಲಿ ವಂಡ್ಸೆ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಕಲಿಕಾಹಬ್ಬ

ಕುಂದಾಪುರ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾರಣಕಟ್ಟೆಯಲ್ಲಿ ವಂಡ್ಸೆ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ (ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ) ಕಲಿಕಾ ಹಬ್ಬ ಡಿ.17ರಂದು ಉದ್ಘಾಟನೆಗೊಂಡಿತು.

ಕಲಿಕಾ ಹಬ್ಬವನ್ನು ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಆಚಾರ್ಯ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಜ್ಯೋತಿ ಪೂಜಾರಿ ವಹಿಸಿದ್ದರು.

ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಮಾಜಿ ಧರ್ಮದರ್ಶಿ ಡಾ.ಅತುಲ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸುಬ್ಬು, ಚಿತ್ತೂರು ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಶೇಖರ ಶೆಟ್ಟಿ, ಮಂಜುನಾಥ ದೇವಾಡಿಗ, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೀತಾರಾಮ್ ಮಡಿವಾಳ, ಚಿತ್ತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶೀಲಾ, ವಂಡ್ಸೆ ವಲಯದ ಶಿಕ್ಷಣ ಸಂಯೋಜಕ ವೆಂಕ ಉಪ್ಪಾರ, ಸಮೂಹ ಸಂಪನ್ಮೂಲ ವ್ಯಕ್ತಿ ರವಿಚಂದ್ರ, ಶೈಲಜಾ, ಕಲಿಕಾ ಹಬ್ಬದ ಸಂಪನ್ಮೂಲ ವ್ಯಕ್ತಿಗಳಾದ ವಿಶ್ವನಾಥ, ದಿನೇಶ, ರಾಧಿಕಾ, ಸುಮಿತ್ರಾ ಉಪಸ್ಥಿತರಿದ್ದರು.

ಪ್ರಾರ್ಥನೆಯನ್ನು ಶಾಲಾ ವಿದ್ಯಾರ್ಥಿನಿಯರು ನೆರವೇರಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಎಂ. ನಾಗರಾಜ ಶೆಟ್ಟಿ ಪ್ರಾಸ್ತಾವಿಕ ಮಾತುಗಳ್ನಾಡಿದರು. ಶಾಲೆಯ ಮುಖ್ಯಶಿಕ್ಷಕ ರವೀಂದ್ರ ಶೆಟ್ಟಿ ವೈ ಸ್ವಾಗತಿಸಿದರು.

ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದಿವಾಕರ ಆಚಾರ್ಯ ಪ್ರೋತ್ಸಾಹಕವಾಗಿ ಊಟದ ತಟ್ಟೆಯನ್ನು ವಿತರಿಸಿದರು. ಸುಮಾರು 12 ಶಾಲೆಯ 150 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅತಿಥಿ ಶಿಕ್ಷಕಿ ಶ್ವೇತಾ ಮತ್ತು ಶ್ರೀಮತಿ ಕಾರ್ಯಕ್ರಮ ನಿರೂಪಿಸಿ, ಶಾಲಾ ಸಹ ಶಿಕ್ಷಕರಾದ ರವೀಂದ್ರ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!