spot_img
Saturday, March 7, 2026
spot_img

ಕೃಷಿ ಪತ್ತಿನ ಸಹಕಾರ ಸಂಘಗಳ ಕ್ರೀಡಾಕೂಟ: ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ: ಎಲ್ಲಾ ಒಟ್ಟು ಮಾಡುವ ಕಾರ್ಯಕ್ರಮ ಇದಾಗಿದೆ. ಅದ್ದೂರಿಯಾಗಿ ನೆಡೆಯಬೇಕು. ಕ್ರೀಡೆಯಲ್ಲಿ ಭಾಗವಹಿಸುವುದು ಅಗತ್ಯ. ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸ ಬೇಕು. ಇದು ಮನಸ್ಸಿಗೆ ಖುಷಿಕೊಡಬೇಕು. ಆ ಕೆಲಸ ನಿರಂತರವಾಗಿ ಮಾಡಬೇಕು. ತಮ ವ್ಯವಹಾರಗಳ ನಡುವೆ ಇದನ್ನು ಮಾಡಬೇಕು. ಎಲ್ಲರೂ ಭಾಗವಹಿಸಿ. ಆಸಕ್ತಿ ಇರುವ ಕ್ರೀಡೆಯಲ್ಲಿ ಬಾಗವಹಿಸಿ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ ಮಹೇಶ ಹೆಗ್ಡೆ ಹೇಳಿದರು.

ಅವರು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ರೀಡಾ ಕೂಟ. ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಇದೊಂದು ಒಳ್ಳೆಯ ಕಾರ್ಯಕ್ರಮ. ಸಹಕಾರಿಗಳಿಗೆ ಈ ಕಾರ್ಯಕ್ರಮ ಮಾದರಿಯಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಲಯ ಮೇಲ್ವಿಚಾರಕರಾದ ಶಿವರಾಮ್ ಯಡ್ತರೆ. ಸಂದೀಪಕುಮಾರ್ ಶೆಟ್ಟಿ , ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಅವಿಭಜಿತ ಕುಂದಾಪುರ ತಾಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ ಕ್ರೀಡಾಸ್ಪರ್ಧೆಗಳ ವಿವರ ನೀಡಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!