spot_img
Sunday, March 8, 2026
spot_img

ರಾಜ್ಯಮಟ್ಟದ ‘ಜ್ಞಾನಸಿಂಧು ಪ್ರಶಸ್ತಿ’ಗೆ ಅಧ್ಯಾಪಕ ಚಿತ್ತೂರು ರವಿರಾಜ ಶೆಟ್ಟಿ ಆಯ್ಕೆ

ಕುಂದಾಪುರ: ಶಿಕ್ಷಣ ಜ್ಞಾನ ಪತ್ರಿಕೆ ಬೆಂಗಳೂರು ಇವರು ಪ್ರತೀ ವರ್ಷ ಕೊಡಮಾಡುವ ಪ್ರೌಢಶಾಲಾ ವಿಭಾಗದ ರಾಜ್ಯ ಮಟ್ಟದ ಜ್ಞಾನಸಿಂಧು ಪ್ರಶಸ್ತಿ-2025ಕ್ಕೆ ಉಡುಪಿ ಜಿಲ್ಲೆಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿಯ ಕನ್ನಡ ಭಾಷಾ ಶಿಕ್ಷಕರಾಗಿರುವ ಚಿತ್ತೂರು ರವಿರಾಜ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

33 ವರ್ಷಗಳ ಸೇವಾ ಹಿರಿತನ ಹೊಂದಿರುವ ಇವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ (ಸಿ.ಆರ್.ಪಿ), ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ (ಬಿ.ಆರ್.ಪಿ) ಯಾಗಿ ಹಾಗೂ ಶಿಕ್ಷಣ ಸಂಯೋಜಕರಾಗಿ ಶೈಕ್ಷಣಿಕ ಪ್ರಗತಿಗೆ ತನ್ನದಾದ ಕೊಡುಗೆ ನೀಡಿದವರು. ತಾಲೂಕು ಜಿಲ್ಲಾ ಮಟ್ಟದ ಅನೇಕ ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿರುವ ಇವರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿಯಾಗಿ ಶಾಲಾಭಿವೃದ್ಧಿಗೆ , ಹಳೆ ವಿದ್ಯಾರ್ಥಿಗಳನ್ನು ಒಗ್ಗೂಡಿಸುವಲ್ಲಿ ಅಪಾರ ಶ್ರಮ ವಹಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶಾಲಾ ಚಟುವಟಿಕೆಗಳಲ್ಲಿ ಉತ್ಸುಕರಾಗಿರುವರನ್ನು ಜ್ಞಾನಸಿಂಧು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದ್ದು ಡಿ.21ರಂದು ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!