spot_img
Sunday, March 8, 2026
spot_img

ಹಟ್ಟಿ‌ಅಂಗಡಿ ವಸತಿ ಶಾಲೆಗೆ, ಸ್ಟಾರ್ ಎಜುಕೇಶನ್ ಅವಾರ್ಡ್ ಗೌರವ

ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿ‌ಅಂಗಡಿಯು ಶಿಕ್ಷಣ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಯಾದ ಸ್ಟಾರ್ ಎಜುಕೇಶನ್ ಅವಾರ್ಡ್ ಪಡೆದುಕೊಂಡಿದೆ.

ಶಿಕ್ಷಣ ಕ್ಷೇತ್ರದಲ್ಲಿ ತರಲಾಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳು-ಸುಧಾರಣೆಗಳು, ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಸಮಾಜಕ್ಕೆ ನೀಡಲಾಗುತ್ತಿರುವ ಕೊಡುಗೆಗಳು ಮತ್ತು ಪಠ್ಯೇತರ ಚಟುವಟಿಕೆ ವಿಭಾಗದಲ್ಲಿ ಶಾಲೆಯು ತೋರಿಸುತ್ತಿರುವ ವಿಶೇಷ ಆಸಕ್ತಿ ಮತ್ತು ಪ್ರೋತ್ಸಾಹಗಳನ್ನು ಗಮನಿಸಿ ಈ ಗೌರವ ನೀಡಲಾಗಿದೆ.

ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಅಧ್ಯಾಪಕಿಬೇಬಿ ಎಸ್ ನಾಯ್ಕ್ ಅವರು ಶಾಲೆಯ ಪರವಾಗಿ ಸಮಾರಂಭದಲ್ಲಿ ಡಿಸೆಂಬರ್ ೧೧, ೨೦೨೫ ರಂದು ಸ್ವೀಕರಿಸಿದರು. ಮುಂಬೈನಲ್ಲಿ ನಡೆದ ಈ ಕಾರ್ಯಕ್ರಮವು ಇSಈ‌ಇ ಹಾಗೂ ಟೈಮ್ಸ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಎಜುಕೇಶನ್ ಸಪ್ಲೈ ಮತ್ತು ಫ್ರಾಂಚೈಸಿ ಎಕ್ಸ್ಪೋ ಕೂಡ ನಡೆಯಿತು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರು ಶಾಲೆಯ ಸಿಬ್ಬಂದಿವರ್ಗ ಮತ್ತು ಆಡಳಿತ ಮಂಡಳಿಯು ಪ್ರೋತ್ಸಾಹ ನೀಡುತ್ತಿರುವುದು, ಮಕ್ಕಳು ಸದಾ ಕ್ರಿಯಾಶೀಲರಾಗಿ, ಸಾಧಿಸುವ ಛಲವುಳ್ಳವರಾಗಿ ಮುಂದೆ ಸಾಗುತ್ತಿರುವುದು ನಮಗೆ ಈ ಗೌರವಪ್ರಾಪ್ತಿಗೆ ಸಹಾಯಕವಾಯಿತು. ಎಂದು ಸಂತೋಷ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!