spot_img
Sunday, March 8, 2026
spot_img

ರಾಜ್ಯಮಟ್ಟದ ‘ಜ್ಞಾನಜ್ಯೋತಿ’ ಪ್ರಶಸ್ತಿಗೆ ಮೊಳಹಳ್ಳಿ ಶಾಲೆ ಶಿಕ್ಷಕಿ ಶೋಭಾ ಸಿ ಶೆಟ್ಟಿ ಆಯ್ಕೆ

ಕುಂದಾಪುರ: ಶಿಕ್ಷಣ ಜ್ಞಾನ ಪತ್ರಿಕೆ ಬೆಂಗಳೂರು ಇವರು ಪ್ರತೀ ವರ್ಷ ಕೊಡಮಾಡುವ ಪ್ರಾಥಮಿಕ ಶಾಲಾ ವಿಭಾಗದ ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿ-2025ಕ್ಕೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿ ಇಲ್ಲಿನ ಶಿಕ್ಷಕಿ ಶೋಭಾ ಸಿ ಶೆಟ್ಟಿ ಆಯ್ಕೆಯಾಗಿದ್ದಾರೆ.

1997ರಲ್ಲಿ ಶಿಕ್ಷಕ ವೃತ್ತಿಗೆ ಸೇರಿದ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಯ್ಕನಕಟ್ಟೆಯಲ್ಲಿ ಐದುವರೆ ವರ್ಷಗಳ ಸೇವೆ ಸಲ್ಲಿಸಿ ಉತ್ತಮ ಶಿಕ್ಷಕಿ ಎನಿಸಿಕೊಂಡರು. 2002ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಸದಾಕಾಲ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸುತ್ತಾ, ಶಿಕ್ಷಕರ ಟಿ.ಎಲ್.ಎಂ ಮೇಳದಲ್ಲಿ ಪ್ರಶಸ್ತಿ ಪಡೆದಿದ್ದು, 2001-2002 ರಲ್ಲಿ ಬೆಂಗಳೂರಿನ ಚಂದನ ವಾಹಿನಿಯಲ್ಲಿ ಬರುವ ಥಟ್ ಅಂಥ ಹೇಳಿ’ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ ಭಾಗವಹಿಸಿದ ಏಕೈಕ ಪ್ರಾಥಮಿಕ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಪ್ರಶಸ್ತಿ ಪಡೆಯಲು ಶ್ರಮ ವಹಿಸಿದ್ದಾರೆ.
ಈವರೆಗೆ ಐದು ಬಾರಿ ಪ್ರಭಾರ ಮುಖ್ಯೋಪಾಧ್ಯಾಯರ ಕರ್ತವ್ಯ ನಿರ್ವಹಿಸಿರುವ ಇವರು 2017-18ರಲ್ಲಿ ಶಾಲಾ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಶಾಲಾ ವಾಹನ ವ್ಯವಸ್ಥೆ, ಸುಸಜ್ಜಿತ ಆಂಗ್ಲ ತರಗತಿ ಆರಂಭ, ಪ್ರತಿ ಬಾರಿ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ, ಜನಪದ ನೃತ್ಯ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆಯಲು ಶ್ರಮಿಸಿದ್ದಾರೆ.

ಇವರ ಸೇವೆಗೆ ಈಗಾಗಲೇ ಕಾಯಕ ಯೋಗಿ ಪ್ರಶಸ್ತಿ, ಉತ್ತಮ ಶಿಕ್ಷಕ ಪ್ರಶಸ್ತಿ ಹಾಗು ಜಾಣ ಕನ್ನಡಿಗ ಪ್ರಶಸ್ತಿ ಲಭಿಸಿದೆ.
ಶಾಲಾ ಚಟುವಟಿಕೆಗಳಲ್ಲಿ ಉತ್ಸುಕರಾಗಿರುವರನ್ನು ಪ್ರತಿಷ್ಠಿತ ಶಿಕ್ಷಣ ಜ್ಞಾನ ಪತ್ರಿಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದ್ದು ಡಿ.21ರಂದು ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!