spot_img
Sunday, March 8, 2026
spot_img

ಶೃಂಗೇರಿ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನೂತನ ಕಟ್ಟಡಗಳ ಉದ್ಘಾಟನೆ

ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಕಟ್ಟಡಗಳನ್ನು ಉದ್ಘಾಟಗಳನ್ನು ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿ ಆಶೀರ್ವಚಿಸಿ, ಪ್ರತಿಯೊಬ್ಬರು ಸಮಾಜದಲ್ಲಿ ವಿದ್ಯಾಭ್ಯಾಸ, ಸದೌಷಧ, ದಾನ ಎಂಬ ಕೆಲಸದ ಕಡೆ ಪ್ರಯತ್ನಶೀಲರಾಗಿರಬೇಕು. ಹಾಗೆಯೇ ಹಣಬಲ, ಜನಬಲದ ಜೊತೆಗೆ ಅದನ್ನು ಮುನ್ನೆಡೆಸುವ ಸಮರ್ಥ ನಾಯಕನಿದ್ದಾಗ ಎಲ್ಲಾ ಕೆಲಸಗಳಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಆ ಸಮಯವನ್ನು ಸದುಪಯೋಗ ಮಾಡಿಕೊಳ್ಳಬೇಕು. ಎಲ್ಲರೂ ಧರ್ಮ ಮಾರ್ಗದಲ್ಲಿ ನಡೆದು ಜೀವನವನ್ನು ನಡೆಸಬೇಕು ಎಂದು ಹೇಳುತ್ತಾ ಸರ್ವರನ್ನು ಅನುಗ್ರಹಿಸಿ ಆಶೀರ್ವದಿಸಿದರು.

ಈ ವೈಭವದ ಕಾರ್ಯಕ್ರಮದಲ್ಲಿ ಜನತಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ಗಣೇಶ್ ಮೊಗವೀರ, ಕಾರ್ಯದರ್ಶಿ ಶ್ಯಾಮಲಾ ಗಣೇಶ್ ಮೊಗವೀರರು, ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ, ಜನತಾ ಸಮೂಹ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ವೃಂದದವರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಊರಿನ ಸಮಸ್ತ ಜನರು ಭಾಗವಹಿಸಿದ್ದರು.

ಗುರುವಂದನ ಕಾರ್ಯಕ್ರಮವು ಅದ್ಧೂರಿಯಿಂದ ನಡೆಯಿತು.
ಉಪನ್ಯಾಸಕ ಉದಯ್ ನಾಯಕ್ ಸ್ವಾಗತಿಸಿ, ದಾಮೋದರ್ ಶರ್ಮ ಬಾರಕೂರು ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!