spot_img
Sunday, March 8, 2026
spot_img

ಶಂಕರನಾರಾಯಣ: ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ “ಮಂಥನ-2025” ಸಮಾರೋಪ

ಶಂಕರನಾರಾಯಣ: ಪಾಠ ಪ್ರವಚನಗಳೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಸ್ಪರ್ಧೆಗಳಲ್ಲಿ ಸೂಕ್ತ ತಯಾರಿಯೊಂದಿಗೆ ಭಾಗವಹಿಸುವುದರಿಂದ ಅವರ ಭವಿಷ್ಯದ ವೃತ್ತಿಜೀವನಕ್ಕೆ ಅಗತ್ಯವಾಗಿರುವ ಧೈರ್ಯ ಮತ್ತು ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ. ಸ್ಪರ್ಧೆಗಳಲ್ಲಿ ಸೋಲು ಅಥವಾ ಗೆಲುವು ಮುಖ್ಯವಾಗುವುದಿಲ್ಲ ಭಾಗವಹಿಸುವಿಕೆ, ತಯಾರಿ ಮತ್ತು ಸ್ಪರ್ಧಾತ್ಮಕ ಮನೋಭಾವ ಉತ್ತಮ ಕಲಿಕೆಯನ್ನು ನೀಡುತ್ತದೆ. ಇಂತಹ ಪ್ರಯತ್ನ ಗ್ರಾಮೀಣ ಭಾಗದ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವುದು ಅತ್ಯಂತ ಸಂತಸದ ವಿಚಾರ ಎಂದು ಸಿದ್ದಾಪುರದ ಉದ್ಯಮಿ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಶ್ರೀಕಾಂತ್ ನಾಯಕ್ ಅವರು ತಿಳಿಸಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಆಂತರಿಕ ಗುಣಮಟ್ಟ ಭರವಸಾಕೋಶ ಮತ್ತು ವಾಣಿಜ್ಯ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ “ಮಂಥನ-೨೦೨೫”ರ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.

ಸ್ಪರ್ಧೆಗಳನ್ನು ಸಿದ್ದಾಪುರದ ಉದ್ಯಮಿ ವಾಸುದೇವ ಪೈ ಉದ್ಘಾಟಿಸಿದರು. ವಾಣಿಜ್ಯಶಾಸ್ತ್ರಕ್ಕೆ ಸಂಬಂಧಿಸಿದ ವೈವಿಧ್ಯಮಯ ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ ಭಟ್ ಅವರ ಅಧ್ಯಕ್ಷತೆ ವಹಿಸಿದ್ದರು. ಪ್ರಜ್ಞಾ ಸ್ವಾಗತಿಸಿ, ವಿದ್ಯಾರ್ಥಿನಿ ಸುಷ್ಮಿತಾ ನಿರೂಪಿಸಿ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಶ್ರೀಮತಿ ಪ್ರವೀಣ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!