spot_img
Sunday, March 8, 2026
spot_img

ರಾಷ್ಟ್ರೀಯ ಹೆದ್ದಾರಿಗಳ ಜನಸ್ನೇಹಿಯಾಗಿರಬೇಕು-ಬಿ.ವೈ.ರಾಘವೇಂದ್ರ | ಆರಾಟೆ ಸೇತುವೆಗೆ ಶಿಲಾನ್ಯಾಸ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಗಳು ಜನಸ್ನೇಹಿಯಾಗಿರಬೇಕು. ಆ ನಿಟ್ಟಿನಲ್ಲಿ ಕೇಂದ್ರ ಸರಕಾರ ರೂಪಿಸುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಚತುಷ್ಪಥ ಹೆದ್ದಾರಿ ವ್ಯಾಪ್ತಿಯಲ್ಲಿ ಮೇಲ್ಸೆತುವೆಗಳು ಸಮರ್ಪಕವಾಗಿ ಮಾಡಲಾಗುವುದು. ಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಜನನಿಬಿಡ ಪ್ರದೇಶದಲ್ಲಿ ಸಮರ್ಪಕ ಯೋಜನೆ ರೂಪಿಸಲಾಗುವುದು. ಈಗಾಗಲೇ ೧೭೦ ಕೋಟಿಯ ಡಿ.ಪಿ.ಆರ್ ಸಿದ್ಧವಾಗಿದೆ. ನಮ್ಮ ಕ್ಷೇತ್ರದಲ್ಲಿ ಯಾವುದೇ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ರೂಪಿಸಲಾಗುವುದು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಅವರು ಶನಿವಾರ ೮೫ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆರಾಟೆ ನೂತನ ಸೇತುವೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಈಗಾಗಲೇ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಸಜ್ಜಿತ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದೆ. ಬೈಂದೂರಿನಿಂದ ರಾಣ ಬೆನ್ನೂರು ತನಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ವಹಿಸಿದ್ದರು. ದಿಶಾ ಸಮಿತಿ ಸದಸ್ಯರಾದ ಪ್ರಿಯದರ್ಶಿನಿ ದೇವಾಡಿಗ, ರಾಮ ಪೂಜಾರಿ, ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಬಿಜೂರು, ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ.,ಐ.ಆರ್.ಬಿ ಇಂಜಿನಿಯರ್ ವಿಜಯಮದನ್ ಕರ್, ವೆಂಕಟರಮಣ ಹೆಗ್ಡೆ ಉಪಸ್ತಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!