spot_img
Sunday, March 8, 2026
spot_img

‘ಸಹಕಾರ ಭಾರತಿ’ ಸಹಕಾರ ಕ್ಷೇತ್ರದಲ್ಲಿ ಸದಾ ಸಕ್ರಿಯವಾಗಿರಬೇಕು-ಶಾಸಕ ಎ.ಕಿರಣ್ ಕೊಡ್ಗಿ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಇವತ್ತು ಸಹಕಾರ ಕ್ಷೇತ್ರ ಪ್ರಬಲವಾಗಿ ಬೆಳೆದಿದೆ. ವಾಣಿಜ್ಯ ಬ್ಯಾಂಕುಗಳಿಗಿಂತ ಸಹಕಾರ ವ್ಯವಸ್ಥೆ ಜನಸಾಮಾನ್ಯರಿಗೆ ಆಪ್ತವಾಗಿದೆ. ಗ್ರಾಮೀಣ ಜನರಿಗೆ ಸಹಕಾರ ಕ್ಷೇತ್ರದ ಮೂಲಕ ಸಹಾಯ ಮಾಡಲು ಸಾಧ್ಯವಿದೆ. ಹಾಗಾಗಿ ಸಹಕಾರ ಭಾರತಿ ಈ ಕ್ಷೇತ್ರ ಸದಾ ಕ್ರಿಯಾಶೀಲವಾಗಿದ್ದು. ಪ್ರಾಬಲ್ಯತೆ ಸಾಧಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಸಹಕಾರ ಭಾರತಿ, ಕುಂದಾಪುರ ತಾಲೂಕು ವತಿಯಿಂದ ಕುಂದಾಪುರ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಮೊಗವೀರ ಭವನದಲ್ಲಿ ನಡೆದ ತಾಲೂಕು ಅಭ್ಯಾಸ ವರ್ಗ-2025 ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಹಕಾರ ಭಾರತಿ ಇನ್ನಷ್ಟು ಪ್ರಬಲವಾಗಲು ನಮ್ಮ ಸಹಕಾರಿಗಳು ಪ್ರಯತ್ನಿಸಬೇಕು. ಸಹಕಾರ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಮಾತ್ರ ಸನ್ನದ್ಧರಾಗದೆ ಸದಾ ಚಟುವಟಿಕೆಯಿಂದ ಇರಬೇಕು. ನಮ್ಮ ಉದ್ದೇಶ ಜನರಿಗೆ ಹೆಚ್ಚು ಸಹಕಾರ ನೀಡುವುದು. ಸಹಕಾರ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಗೆ ಸಹಕಾರ ಮಾಡೋಣ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷರಾದ ದಿನೇಶ ಹೆಗ್ಡೆ ಆತ್ರಾಡಿ ಮಾತನಾಡಿ, ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಸಹಕಾರ ಭಾರತಿಯಲ್ಲೂ ಅಭ್ಯಾಸ ವರ್ಗ ನಡೆಸಲಾಗುತ್ತಿದೆ. ಸಂಘದ ಒಂದು ಭಾಗವಾಗಿರುವ ಸಹಕಾರ ಭಾರತಿ ಸೇವಾ ಮನೋಭಾವವನ್ನು ಹೊಂದಿರುವ ಸಹಕಾರ ವ್ಯವಸ್ಥೆ. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಲಕ್ಷ್ಮಣ ರಾವ್ ಇನಾಂದಾರ್ ಎನ್ನುವ ವ್ಯಕ್ತಿ ಸಹಕಾರ ಭಾರತಿಯ ಮೂಲಕ ಜನರ ಅಭಿವೃದ್ಧಿಗೆ ಶ್ರಮಿಸಿದರು. ಇವತ್ತು ಸಹಕಾರ ಕ್ಷೇತ್ರ ವಿಸ್ತಾರವಾಗಿ ಬೆಳೆದಿದೆ. ೪೦ ಕೋಟಿಗೂ ಹೆಚ್ಚು ಸಹಕಾರಿಗಳಿದ್ದಾರೆ. ೬೫೩ ಜಿಲ್ಲೆಗಳಲ್ಲಿ ಸಹಕಾರ ಭಾರತಿ ಕಾರ್ಯನಿರ್ವಹಿಸುತ್ತಿವೆ. ಸಹಕಾರ ವ್ಯವಸ್ಥೆಯಲ್ಲಿ ಇನ್ನೂ ಮಹತ್ತರವಾದ ಬದಲಾವಣೆಗಳು ಆಗಬೇಕು. ಬದಲಾವಣೆಗಳು ಆಗಬೇಕು. ಆ ನಿಟ್ಟಿನಲ್ಲಿ ಸಹಕಾರ ಭಾರತಿ ಕಾರ್ಯನಿರ್ವಹಿಸಬೇಕು. ಹಾಗಾಗಿ ವಿಷಯ ತಜ್ಞರ ಮೂಲಕ ಅಭ್ಯಾಸ ವರ್ಗ ನಡೆಸಲಾಗುತ್ತಿದೆ ಎಂದರು.

ಸಹಕಾರ ಭಾರತಿಯ ಕುಂದಾಪುರ ತಾಲೂಕು ಅಧ್ಯಕ್ಷರಾದ ಸದಾನಂದ ಬಳ್ಕೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಹಕಾರ ಕ್ಷೇತ್ರಕ್ಕೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಸಹಕಾರಿಗಳು ಶ್ರಮಿಸುತ್ತಿದ್ದಾರೆ. ಅಭ್ಯಾಸ ವರ್ಗದ ಮೂಲಕ ಇನ್ನಷ್ಟು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಸಾಧ್ಯವಿದೆ. ಸಹಕಾರ ಭಾರತಿ ತತ್ವ, ಸಿದ್ದಾಂತ, ಸೇವಾ ಮನೋಭಾವನ್ನು ನಾವು ಅಳವಡಿಸಿಕೊಳ್ಳಬೇಕು ಎಂದರು.
ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸುರೇಂದ್ರ ಕಾಂಚನ್ ಪ್ರಾರ್ಥನೆ ನೆರವೇರಿಸಿದರು. ಸಹಕಾರ ಭಾರತಿ ತಾಲೂಕು ಅಧ್ಯಕ್ಷರಾದ ಸದಾನಂದ ಬಳ್ಕೂರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಬೇಳೂರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಬಳಿಕ ಸಹಕಾರ ಭಾರತಿ ಪರಿಚಯ ದ್ಯೇಯೋದ್ದೇಶ ಸಹಕಾರಿ ಕಾಯಿದೆ ಹಾಗೂ ನಿರ್ದೇಶಕರ ಜವಬ್ದಾರಿ ಮತ್ತು ಕರ್ತವ್ಯದ ಬಗ್ಗೆ ಸಹಕಾರ ಭಾರತಿ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯ ಎಸ್.ಕೆ ಮಂಜುನಾಥ ಗೋಷ್ಠಿ ನಡೆಸಿಕೊಟ್ಟರು.

ಕಾರ್ಯಕರ್ತ-ಕಾರ್ಯ ಪದ್ದತಿ ಪಂಚ ಪರಿವರ್ತನೆ-ಸಂಘ ಶತಾಬ್ದಿ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುಬ್ರಹ್ಮಣ್ಯ ಹೊಳ್ಳ ಗೋಷ್ಠಿ ನಡೆಸಿಕೊಟ್ಟರು. ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೀಶ್ ನಾಯಕ್, ಸಹಕಾರಿ ಕ್ಷೇತ್ರದ ನಾಯಕರುಗಳು ಉಪಸ್ಥಿತರಿದ್ದರು,

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!