spot_img
Monday, March 16, 2026
spot_img

ಪ್ರತಿಭಾ ಕಾರಂಜಿ: ವಂಡ್ಸೆ ಶಾಲೆ ವಿದ್ಯಾರ್ಥಿನಿ ಸಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಕಥೆ ಹೇಳುವ ಸ್ಪರ್ಧೆಯಲ್ಲಿ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ವಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಸಂತೋಷ್ ಮತ್ತು ಚೈತ್ರ ದಂಪತಿಯ ಪುತ್ರಿ.

ಹಾಗಯೇ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 4ನೇ ತರಗತಿ ವಿದ್ಯಾರ್ಥಿನಿ ಪ್ರೇಕ್ಷಾ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈಕೆ ರಾಜೀವ ಮತ್ತು ಸುಜಾತ ದಂಪತಿಯ ಪುತ್ರಿ.

4ನೇ ತರಗತಿ ವಿದ್ಯಾರ್ಥಿನಿ ಸಮೃದ್ಧಿ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ, ಧಾರ್ಮಿಕ ಪಠಣದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ರಾಫಿಲಾತ್ ದ್ವಿತೀಯ, ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಆರಾಧ್ಯ ತೃತೀಯ ಸ್ಥಾನ ಪಡೆದಿದ್ದಾರೆ.

ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ, ಶಾಲಾಭಿವೃದ್ಧಿ ಸಮಿತಿ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್, ಹಳೆವಿದ್ಯಾರ್ಥಿ ಸಂಘದವರು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!