spot_img
Friday, January 30, 2026
spot_img

ಜ್ಞಾನ ಬೆಳೆಸುವ ಆಧುನಿಕ ಶಕ್ತಿ ಡಿಜಿಟಲ್ ಗ್ರಂಥಾಲಯ-ರವಿಚಂದ್ರ ಹೆಚ್.ಎಸ್

ಶಂಕರನಾರಾಯಣ: ತಂತ್ರಜ್ಞಾನ ಯುಗದಲ್ಲಿ ಗ್ರಂಥಾಲಯಗಳ ಮಹತ್ವ, ವಿದ್ಯಾರ್ಥಿಗಳ ಓದು ಚಟುವಟಿಕೆಗಳ ವಿಸ್ತರಣೆ ಹಾಗೂ ಜ್ಞಾನ ಸಂಪಾದನೆಯಲ್ಲಿ ಡಿಜಿಟಲ್ ಸಂಪನ್ಮೂಲಗಳ ಬಳಕೆ ಅಗತ್ಯ. ಓದುಗರ ವೇದಿಕೆ ವಿದ್ಯಾರ್ಥಿಗಳಲ್ಲಿ ಪುಸ್ತಕ ಪ್ರೇಮ ಮತ್ತು ಓದು ಸಂಸ್ಕೃತಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆಯಲು ಬೇಕಾದ ಜ್ಞಾನ ಬೆಳೆಸುವ ಶಕ್ತಿ ಡಿಜಿಟಲ್ ಗ್ರಂಥಾಲಯಕ್ಕಿದೆ ಎಂದು ಶ್ರೀ ಕಾಳಾವರ ವರದರಾಜ ಎಮ್ ಶಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ರವಿಚಂದ್ರ ಹೆಚ್.ಎಸ್. ಅವರು ಹೇಳಿದರು

ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಗ್ರಂಥಾಲಯ ಮಾಹಿತಿ ವಿಜ್ಞಾನ ವಿಭಾಗ ಸಹಯೋಗದಲ್ಲಿ ಡಿಜಿಟಲ್ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಹಾಗೂ ಓದುಗರ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಮಾತನಾಡಿ, ಡಿಜಿಟಲ್ ಗ್ರಂಥಾಲಯದಿಂದ ವಿದ್ಯಾರ್ಥಿಗಳು ಸುಲಭವಾಗಿ ಎಲ್ಲಾ ರೀತಿಯ ಅಧ್ಯಯನ ಸಾಮಗ್ರಿಗಳನ್ನು ಪಡೆಯುವ ಅವಕಾಶ ಒದಗಲಿದೆ. ಡಿಜಿಟಲ್ ಗ್ರಂಥಾಲಯ ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಇನ್ನಷ್ಟು ಸಮೃದ್ಧಗೊಳಿಸುವಲ್ಲಿ ಸಹಾಯಕವಾಗುತ್ತದೆ ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕ ಪ್ರಸ್ತುತ ವೈ.ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ರತಿಕಾ ಸ್ವಾಗತಿಸಿ, ಸಿಂಚನಾ ವಂದಿಸಿದರು. ಅಕ್ಷತಾ ಬಿರಾದಾರ ಕಾರ್ಯಕ್ರಮವನ್ನು ನಿರೂಪಿಸಿದರು. ಗ್ರಂಥಪಾಲಕಿ ಪೂರ್ಣಿಮಾ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!