spot_img
Sunday, March 8, 2026
spot_img

ಸ.ಹಿ.ಪ್ರಾ.ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ನೂಜಾಡಿ-2 ಬಗ್ವಾಡಿ : ಡಿ.30ಕ್ಕೆ  ಶತಮಾನೋತ್ಸವ

kundapura: ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ನೂಜಾಡಿ-2 ಬಗ್ವಾಡಿ ಇದರ ಶತಮಾನೋತ್ಸವ ಕಾರ್ಯಕ್ರಮ ಡಿಸೆಂಬರ್ 30 ಮಂಗಳವಾರ ನಡೆಯಲಿದೆ.

ಬೆಳಿಗ್ಗೆ 8 ಗಂಟೆಗೆ ಪುರಮೆರವಣಿಗೆ, ಬಳಿಕ ಧ್ವಜಾರೋಹಣ, ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪೂರ್ವಾಹ್ನ 9.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ, ದಾನಿಗಳಿಗೆ ಗೌರವಾರ್ಪಣೆ, ಸೇವಾ ಪುರಸ್ಕಾರ, ಮಧ್ಯಾಹ್ನ ಭೋಜನ ಕೂಟ, ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಗೌರವಿಸುವ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಯಿಂದ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶತಮಾನೋತ್ಸವ ಭವನ ಉದ್ಘಾಟಿಸಲಿದ್ದಾರೆ. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರವೇಶಧ್ವಾರವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಕಛೇರಿಯನ್ನು ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ ಉದ್ಘಾಟಿಸುವರು. ತರಗತಿ ಕೊಠಡಿಯನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉದ್ಘಾಟಿಸಲಿದ್ದಾರೆ. ಅಕ್ಷರ ದಾಸೋಹ ಕೊಠಡಿಯನ್ನು ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಉದ್ಘಾಟಿಸುವರು. ಆರೋಗ್ಯ ಮತ್ತು ಶುಚಿತ್ವ ಕೇಂದ್ರವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಮಾಜಿ ಶಾಸಕ ಗೋಪಾಲ ಪೂಜಾರಿ ಬಿಡುಗಡೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾಪು ಕ್ಷೇತ್ರದ ಶಾಸಕ ಸುರೇಶ ಶೆಟ್ಟಿ ಗುರ್ಮೆ,ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಾಬು ಹೆಗ್ಡೆ ಆಗಮಿಸಲಿದ್ದಾರೆ. ಡಾ.ದಿನಕರ ಶೆಟ್ಟಿ ಯು.ಎಸ್.ಎ ಬಗ್ವಾಡಿ ಮೆತ್ತಿನಮನೆ ಸ್ವಸ್ತಿ ವಾಚನ ಮಾಡಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಗುರುವಂದನೆ, ದಾನಿಗಳಿಗೆ ಮತ್ತು ಮಹಾ ಪೋಷಕರಿಗೆ ಗೌರವ ಸನ್ಮಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಮಾಯಾಪುರಿ ಮಹಾತ್ಮೆ ಮತ್ತು ವೀರಮಣಿ ಕಾಳಗ ನಡೆಯಲಿದೆ.

ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ, ಗೌರವಾಧ್ಯಕ್ಷರಾದ ಬಿ.ರಾಜೀವ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ರಾಧಾಕೃಷ್ಣ ಗಾಣಿಗ, ವಿದ್ಯಾರ್ಥಿ ನಾಯಕ ರಿತ್ವಿಕ್, ಮುಖ್ಯೋಪಾಧ್ಯಾಯರಾದ ಶೈಲಜಾ ವಿ.ಶೆಟ್ಟಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!