spot_img
Sunday, March 8, 2026
spot_img

ವಂಡ್ಸೆ ಶಾಲೆ: ಬಹುಮಾನ ವಿತರಣಾ ಕಾರ್ಯಕ್ರಮ

ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯ ಸುಬ್ರಹ್ಮಣ್ಯ ಮಂಜ ಸಭಾಭವನದಲ್ಲಿ ನಡೆಯಿತು.

ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ, ಬಿ.ಆರ್.ಪಿ ಮಂಜುನಾಥ ದೇವಾಡಿಗ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಶಾಲೆಯ ಮುಖ್ಯೋಪಾಧ್ಯಾಯರಾದ ಶಂಕರ್, ಸಿ.ಆರ್.ಪಿಸತೀಶ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪ್ರತಿನಿಧಿ ಪ್ರತಾಪಕುಮಾರ್ ಶೆಟ್ಟಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಮಾಡಿದರು. ಹಿರಿಯ ಶಿಕ್ಷಕಿ ನಾಗವೇಣಿ ಸ್ವಾಗತಿಸಿದರು. ಶಿಕ್ಷಕಿ ಭಾರತಿ ವಂದಿಸಿದರು. ಶಿಕ್ಷಕ ಸುಧಾಕರ ಕಾರ್ಯಕ್ರಮ ನಿರ್ವಹಿಸಿದರು. ಎಲ್ಲಾ ಶಿಕ್ಷಕ, ಶಿಕ್ಷಕಿಯರು ತಮ್ಮ ತರಗತಿಯ ಬಹುಮಾನ ವಿಜೇತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಪದಕ ನೀಡಿ ಅಭಿನಂದಿಸಲಾಯಿತು.

ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ತರಗತಿಯನ್ನು ಹೊಂದಿರುವ ಈ ಶಾಲೆಯಲ್ಲಿ ವಾರ್ಷಿಕೋತ್ಸವ ಪೂರ್ವದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿಸಲಾಗುತ್ತದೆ. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳ ಕ್ರೀಡಾಕೂಟ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು, ಛದ್ಮವೇಷ ಸ್ಪರ್ಧೆ, ವಿನೋದ ಆಟಗಳ ಸ್ಪರ್ಧೆಯನ್ನು ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!