spot_img
Saturday, March 7, 2026
spot_img

ಡಿ.27ಕ್ಕೆ ಬೈಂದೂರು ನೂತನ ಬಸ್ ನಿಲ್ದಾಣ ಉದ್ಘಾಟನೆ

ಬೈಂದೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ ಇವರ ವತಿಯಿಂದ ಬೈಂದೂರು ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ಬೆಳಗ್ಗೆ 11.30 ಕ್ಕೆ ಬೈಂದೂರು ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಸ್.ಅರ್.ಶ್ರೀನಿವಾಸ್ (ವಾಸು), ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಬೆಂಗಳೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಬೈಂದೂರು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ , ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!