spot_img
Wednesday, April 22, 2026
spot_img

ಕ್ರೀಡಾಮೃತ 2025: ವಾಲಿಬಾಲ್ ಪಂದ್ಯಾಟದಲ್ಲಿ ಕೋಟೇಶ್ವರ ಪ್ರಥಮ

ಕುಂದಾಪುರ :ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಿದ ವಾಲಿಬಾಲ್ ಪಂದ್ಯಾಟದಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘ ಪ್ರಥಮ ಸ್ಥಾನ ಗಳಿಸಿದೆ.

ದ್ವಿತೀಯ ಸ್ಥಾನವನ್ನು ಖಂಬದಕೋಣೆ ರೈತರ ಸೇವಾ ಸಹಕಾರ ಸಂಘ ಪಡೆದುಕೊಂಡಿತು.

ಪಂದ್ಯಾಟದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ‌ ನಿರ್ದೇಶಕರಾದ ಎಂ. ಮಹೇಶ ಹೆಗ್ಡೆ ಉದ್ಘಾಟಿಸಿದರು.

ದ.ಕ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಎಸ್  ಪ್ರಕಾಶಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ ಉಪಸ್ಥಿತರಿದ್ದರು.

ಕೃಷಿ ಪತ್ತಿನ ನೌಕರರ ಸಂಘದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್ ಸ್ವಾಗತಿಸಿ ಕಾರ್ಯದರ್ಶಿ ಕೀರ್ತಿ ಕುಮಾರ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!