spot_img
Saturday, March 7, 2026
spot_img

ವಿದ್ಯಾರ್ಥಿಗಳ ಪ್ರತಿಭಾವ್ಯಕ್ತಿಗೆ ಶಾಲಾ ವಾರ್ಷಿಕೋತ್ಸವ ಅಗತ್ಯ-ಕೃಷ್ಣಮೂರ್ತಿ ಮಂಜರು

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ: 111ನೇ ವರ್ಷದ ವಾರ್ಷಿಕೋತ್ಸವ

ಕುಂದಾಪುರ: ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅಭಿವ್ಯಕ್ತಿ ಹಾಗೂ ಸಭಾಕಂಪನ ದೂರ ಮಾಡಲು ಶಾಲಾ ವಾರ್ಷಿಕೋತ್ಸವಗಳು ಸಹಕಾರಿಯಾಗುತ್ತದೆ. ಹಾಗಾಗಿ ಪ್ರತೀ ವರ್ಷ ಶಾಲಾ ವಾರ್ಷಿಕೋತ್ಸವ ಆಯೋಜಿಸಿ ಮಕ್ಕಳ ಪ್ರತಿಭೆ ಪೋಷಿಸಬೇಕು ಎಂದು ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು, ಹೈದರಬಾದ್ ಹೋಟೆಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು.

ಅವರು ಡಿ.27ರಂದು ನಡೆದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇದರ 111ನೇ ವರ್ಷದ ಶಾಲಾ ವಾರ್ಷಿಕೋತ್ಸವ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ, ಸಂಸ್ಕೃತಿ, ಸಾಂಸ್ಕೃತಿಕ ಮೌಲ್ಯಗಳನ್ನು ಕಲಿಸಬೇಕು. ನಾಲ್ಕು ವರ್ಷದ ಒಳಗಿನ ಮಗು ಹಾಗೂ 70 ವರ್ಷ ಮೇಲ್ಪಟ್ಟ ಕೆಲವು ವೃದ್ದರು ಭೌದ್ದಿಕವಾಗಿ ಒಂದೇ ರೀತಿ ಇರುತ್ತಾರೆ. ಇದನ್ನು ನಾವು ಮಕ್ಕಳಿಗೆ ತಿಳಿಸಿಕೊಡಬೇಕು. ಮಕ್ಕಳು ವೃದ್ದಾಪ್ಯದಲ್ಲಿರುವ ತಂದೆತಾಯಿಯನ್ನು ಅನಾಥಶ್ರಮಕ್ಕೆ ಸೇರಿಸದೆ ತಮ್ಮನ್ನು ಬಾಲ್ಯದಲ್ಲಿ ಪೋಷಿಸಿದ ನೆನಪಿನಲ್ಲಿ ಪೋಷಿಸುವಂತಾಗಬೇಕು. ಕೌಟುಂಬಿಕ ಸಂಬಂಧಗಳ ಮಹತ್ವ, ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ಬಾಲ್ಯದಿಂದಲೇ ತಂದೆತಾಯಿ ಹಾಗೂ ಶಾಲೆಯಲ್ಲಿ ಕಲಿಸುವ ಕೆಲಸ ಆಗಬೇಕು. ಸಾಧ್ಯವಾದಷ್ಟು ಮಕ್ಕಳನ್ನು ಮೊಬೈಲ್ ನಿಂದ ದೂರವಿಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೇಂದ್ರ ರೈಲ್ವೆ ಸಚಿವಾಲಯದ ನಿವೃತ್ತ ವಿಶೇಷ ಕರ್ತವ್ಯಾಧಿಕಾರಿ ಬಿ.ಎನ್.ಶೆಟ್ಟಿ ಮಾತನಾಡಿ ದೇಶದ ಪ್ರಗತಿಯಲ್ಲಿ ಮಕ್ಕಳ ಶಿಕ್ಷಣ ಮತ್ತು ಮಕ್ಕಳ ಆರೋಗ್ಯ ಮಹತ್ವದ ಪಾತ್ರವಹಿಸುತ್ತದೆ. ಯಾವ ಮಗುವೂ ಕೂಡಾ ಶಿಕ್ಷಣದಿಂದ ವಂಚಿತವಾಗಬಾರದು. ಅದೇ ರೀತಿ ಮಗು ಅಪೌಷ್ಟಿಕತೆಯಿಂದ ಬಳಲಬಾರದು. ಕಡ್ಡಾಯ ಶಿಕ್ಷಣ ಕಾಯ್ದೆ ಆ ನಿಟ್ಟಿನಲ್ಲಿ ಮಹತ್ತರವಾದ ಬದಲಾವಣೆ ತಂದಿದೆ. ಶಿಕ್ಷಕರು, ಪೋಷಕರು, ಮಕ್ಕಳು ಬಲಿಷ್ಠ ದೇಶದ ನಿಮಾರ್ಣದ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

ನಿರಾಮಯ ಸೊಸೈಟಿ ಅಧ್ಯಕ್ಷರು, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಮಾತನಾಡಿ, ಶತಮಾನೋತ್ಸವದ ಸವಿನೆನಪಿನಲ್ಲಿ ಈ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗ, ಪೂರ್ವಪ್ರಾಥಮಿಕ ಶಿಕ್ಷಣ ಪ್ರಾರಂಭಗೊಂಡು ಇವತ್ತು 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸುತ್ತಲಿನ ಗ್ರಾಮಗಳಿಂದ ಇಲ್ಲಿಗೆ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಈ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವತ್ತ ಗಮನ ಹರಿಸಬೇಕು ಎಂದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ ಟಿ ಅಧ್ಯಕ್ಷತೆ ವಹಿಸಿ, 1943ರಲ್ಲಿ ನನ್ನ ತಂದೆಯ ತಂದೆ ಇಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ನನ್ನ ತಂದೆ, ಚಿಕ್ಕಪ್ಪ ಈ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ್ದರು. ಹಾಗೆಯೇ ನನಗೂ ಈ ಶಾಲೆಗೂ ಬಾಂಧವ್ಯ ಬೆಳೆಯಿತು. ನನ್ನ ಮಗಳನ್ನು ಈ ಶಾಲೆಗೆ ಸೇರಿಸಿದ ಬಗ್ಗೆ ಹೆಮ್ಮೆ ಇದೆ. ಈ ಶಾಲೆಯಲ್ಲಿ ಉತ್ತಮ ಕ್ರೀಯಾಶೀಲ ಶಿಕ್ಷಕರ ತಂಡವೇ ಇದೆ. ಅವರವರ ವಿಷಯದಲ್ಲಿ ಅವರು ವಿಶೇಷವಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶ್ರಮಿಸುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ ಇಲ್ಲಿ ದೊರೆಯುತ್ತಿದೆ ಎನ್ನುವುದನ್ನು ನಾವು ಕಂಡುಕೊಂಡಿದ್ದೇವೆ ಎಂದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಮಾತನಾಡಿ, ಹಳೆ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಬಗ್ಗೆ ಅಭಿಮಾನದಿಂದ ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಹಳೆ ವಿದ್ಯಾರ್ಥಿಗಳು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಶಾಲೆಯ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಏರಿಸಬೇಕು ಎಂದರು.

ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಶುಭ ಹಾರೈಸಿದರು.

ಬೆಂಗಳೂರು ಕೈಗಾರಿಕೋದ್ಯಮಿ ರಮೇಶ್ ದೇವಾಡಿಗ ನೂಜಿನಮನೆ, ಬೆಳಗಾವಿ ಉದ್ಯಮಿ ಪ್ರಭಾಕರ ಎನ್ ಶೆಟ್ಟಿ ತೋಟದಮನೆ ನಂದ್ರೋಳ್ಳಿ, ಕೆಡಿಪಿ ಸದಸ್ಯರಾದ ಕೆ.ಪ್ರಸನ್ನ ಕುಮಾರ್ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ಉದಯ ಜಿ.ಪೂಜಾರಿ, ಕ.ರಾ.ಪ್ರಾ.ಶಿ.ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ಜಿ.ಶ್ರೀಧರ ಶೆಟ್ಟಿ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟಿಗಳಾದ ಆನಂದ ಶೆಟ್ಟಿ ಸಬ್ಲಾಡಿ, ನಾರಾಯಣ ಶೆಟ್ಟಿ ಕೊಳ್ತ, ಶ್ರೀನಿವಾಸ ಪೂಜಾರಿ, ನಿಶ್ಚಿತ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ವಂಡ್ಸೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಪ್ರತಾಪಕುಮಾರ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಶಂಕರ್, ವಿದ್ಯಾರ್ಥಿ ನಾಯಕ ಸುಹಾನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ಅವರನ್ನು ಸನ್ಮಾನಿಸಲಾಯಿತು. ಬೆಳಗಾವಿ ಅಧಿವೇಶನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿಗಳಾದ ತುಳಸಿ ಮತ್ತು ಆಯುಷಿ, ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಸಾನ್ವಿ, ಹಾಗೂ ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ದತ್ತಿನಿಧಿ ಬಹುಮಾನಗಳನ್ನು ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳು, ಪೋಷಕರ ಕ್ರೀಡಾಕೂಟದ ಬಹುಮಾನ ವಿತರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಶಾಲಾ ಮಖ್ಯೋಪಾಧ್ಯಾಯರಾದ ಶಂಕರ ವರದಿ ಮಂಡಿಸಿದರು. ಶಿಕ್ಷಕ ಸೋಮರಾಯ ಜನ್ನು ಸ್ವಾಗತಿಸಿದರು. ಶಿಕ್ಷಕಿ ನಾಗವೇಣಿ ವಿದ್ಯಾರ್ಥಿಗಳ ದತ್ತಿನಿಧಿ ಪಟ್ಟಿ ವಾಚಿಸಿದರು. ಶಿಕ್ಷಕಿ ವಾಣಿಶ್ರೀ ಜನ್ನು ಮಕ್ಕಳ ಪ್ರತಿಭಾ ಪುರಸ್ಕಾರ ಪಟ್ಟಿ ವಾಚಿಸಿದರು. ಶಿಕ್ಷಕಿಯರಾದ ಭಾರತಿ, ಉಷಾ ಐ.ಎಸ್ ಪೋಷಕರ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕಿಯರಾದ ಶಾಂತಾ ಪಾದೇಮಠ, ಶೈಲಶ್ರೀ ಹಳೆ ವಿದ್ಯಾರ್ಥಿಗಳ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕಿ ಇಂದಿರಾ ಜೆ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕ ಸುಧಾಕರ ಮರಕಾಲ ವಂದಿಸಿದರು. ಶಿಕ್ಷಕರಾದ ಸದಾಶಿವ ಮತ್ತು ಶಾಂತಲಾ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು, ಬೋದಕೇತರ ಸಿಬ್ಬಂದಿಗಳು ಸಹಕರಿಸಿದರು. ಸಭಾಕಾರ್ಯಕ್ರಮದ ಪೂರ್ವದಲ್ಲಿ ಅಂಗನವಾಡಿ, ಪೂರ್ವಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ, ಹಾಗೂ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ನಡೆಯಿತು.

ಶತಮಾನೋತ್ಸವದ ಬಳಿಕ ಪ್ರತೀ ವರ್ಷ ಶಾಲಾ ವಾರ್ಷಿಕೋತ್ಸವ ನಡೆಯುತ್ತಿದ್ದು ಜಾತ್ರೆಯ ವಾತಾವರಣ ನಿರ್ಮಾಣವಾಗುತ್ತದೆ. ಈ ಸಲದ ವಾರ್ಷಿಕೋತ್ಸವಕ್ಕೆ ಸುಮಾರು 2500ಕ್ಕೂ ಹೆಚ್ಚು ಜನ ಆಗಮಿಸಿದ್ದರು. ಮಕ್ಕಳ ಯಕ್ಷಗಾನ, ಜಾನಪದ ಶೈಲಿಯ ನೃತ್ಯಗಳು ಜನಮೆಚ್ಚುಗೆಗೆ ಪಾತ್ರವಾಯಿತು.

 ಧ್ವಜಾರೋಹಣ :

ಬೆಳಿಗ್ಗೆ ನಡೆದ ಸಭಾ ಕಾರ್ಯಕ್ರಮದಲ್ಲಿ ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ ಧ್ವಜಾರೋಹಣ ನೆರವೇರಿಸಿ ಸಂದರ್ಬೋಚಿತವಾಗಿ ಮಾತನಾಡಿದರು. ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು. ಉದ್ಯಮಿ ರಾಘವೇಂದ್ರ ಪೂಜಾರಿ ಜಡ್ಡು, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲಾ ಎಸ್ ವಂಡ್ಸೆ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ವಂಡಬಳ್ಳಿ ಜಯರಾಮ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ನಾಗೇಂದ್ರ ಉಡುಪ, ಶಿಕ್ಷಣ ಸಂಯೋಜಕರಾದ ವೆಂಕಪ್ಪ ಉಪ್ಪಾರ್, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ತಾಪಂ ಮಾಜಿ ಸದಸ್ಯ ಉದಯ ಜಿ.ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಸರಕಾರಿ ನೌಕರರ ಸಂಘದ ನಿರ್ದೇಶಕ ಪ್ರತಾಪ ಕುಮಾರ್ ಶೆಟ್ಟಿ, ಶಾಲೆಯ ಮುಖ್ಯಶಿಕ್ಷಕರಾದ ಶಂಕರ್, ಶಿಕ್ಷಣ ಇಲಾಖೆಯ ದಿವಾಕರ ಉಪಸ್ಥಿತರಿದ್ದರು.

(ಚಿತ್ರಗಳು: ಸುಜಿ ಸ್ಟುಡಿಯೋ ವಂಡ್ಸೆ)

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!