spot_img
Saturday, March 7, 2026
spot_img

ಸ.ಹಿ.ಪ್ರಾ.ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ನೂಜಾಡಿ-೨ ಬಗ್ವಾಡಿ: ಶತಮಾನೋತ್ಸವ ಸಮಾರಂಭ ಸಂಪನ್ನ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ನೂಜಾಡಿ-೨ ಬಗ್ವಾಡಿ ಇದರ ಶತಮಾನೋತ್ಸವ ಕಾರ್ಯಕ್ರಮ ಡಿಸೆಂಬರ್ 30 ಮಂಗಳವಾರ ಅದ್ದೂರಿಯಾಗಿ ನಡೆಯಿತು.

ಸಂಜೆ ನಡೆದ ಸಮಾರೋಪ ಕಾರ್ಯಕ್ರಮವನ್ನು ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾ, ಇಚ್ಚಾಶಕ್ತಿ ಇದ್ದರೆ ಸಂಘಟನೆಯಲ್ಲಿ ತೊಡಗಿಸಿಕೊಂಡರೆ ಏನೂ ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ಈ ಶಾಲೆಯ ಸಾಧನೆಯೇ ಉದಾಹರಣೆ. ಸರಕಾರಿ ಶಾಲೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಬಹುದು ಎನ್ನುವುದಕ್ಕೆ ಈ ಭಾಗದ ದಾನಿಗಳು ತೋರಿಸಿಕೊಟ್ಟಿದ್ದಾರೆ. ಈ ಶಾಲೆ ಈ ಭಾಗದ ಮಾದರಿಯಾಗಿ ನಿರ್ಮಿಸುವ ಕೆಲಸ ಆಗಬೇಕು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಬಿ.ಎನ್ ಶೆಟ್ಟಿ ಅವರು, ಈ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆದಿದೆ. ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲ ಎನ್ನುವಂತೆ ಈ ಶಾಲೆಯಲ್ಲಿ ಮೂಲಸೌಕರ್ಯದೊಂದಿಗೆ ಶಿಕ್ಷಣ ದೊರಕುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ತನ್ನದೆಯಾದ ಛಾಪನ್ನು ಈ ಸಂಸ್ಥೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೃತಕ ಬುದ್ದಿಮತ್ತೆಯಂತಹ ಸುಧಾರಿತ ಸೌಲಭ್ಯಗಳು ಈ ಶಾಲೆಯಲ್ಲಿ ದೊರಕುವಂತಾಗಲಿ ಎಂದರು.

ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಪೂಜಾರಿ, ಶಾರದಾ ಮೊಗವೀರ, ಎಂ.ಆರ್.ಪಿ.ಎಲ್ ಮಂಗಳೂರು ಇದರ ಉದಯ ಬಿ., ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಬಗ್ವಾಡಿ ಮೆತ್ತಿನಮನೆ ವೆಂಕಮ್ಮ ರಾಮಣ್ಣ ಶೆಟ್ಟಿ ಟ್ರಸ್ಟ್ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿ ಎಂ.ಎನ್ ಚಂದನ್, ಪೂರ್ಣಿಮಾ ಪ್ರಿಂಟರ್‍ಸ್ ಬೆಂಗಳೂರು ಇದರ ಬಿ.ಕುಸುಮಾಕರ ಶೆಟ್ಟಿ, ಬೆಂಗಳೂರು ಉದ್ಯಮಿ ಶೇಖರ ಶೆಟ್ಟಿ, ಹೋಟೆಲ್ ಶುಭಲಕ್ಷ್ಮೀ, ಜೆ.ಕೆ ಟವರ್ ಕುಂದಾಪುರ ಇದರ ಅಶೋಕ್ ಶೆಟ್ಟಿ ಸಂಸಾಡಿ, ಪುರೋಹಿತರಾದ ನಾಗಪ್ಪಯ್ಯ ಭಟ್, ಕೃಷಿ ಉತ್ಪನ್ನ ಮತ್ತು ಮಾರಾಟ ಸಹಕಾರ ಸಂಘದ ನಿವೃತ್ತ ಪ್ರಭಂದಕರಾದ ಸೂಲಿಯಣ್ಣ ಶೆಟ್ಟಿ, ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ವಕೀಲರಾದ ಶಾಂತಾರಾಮ ಶೆಟ್ಟಿ ಹುಬ್ಬಳ್ಳಿ, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೈಂದೂರು ವಲಯ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ, ಪೂರ್ಣಿಮಾ ಕ್ಯಾಶ್ಯೂಸ್ ಜನ್ನಾಡಿ ಇದರ ಶಂಕರ ಹೆಗ್ಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಯೋಜನಾಧಿಕಾರಿ ಉಮೇಶ ಶೆಟ್ಟಿ, ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ, ಗೌರವಾಧ್ಯಕ್ಷರಾದ ಬಿ.ರಾಜೀವ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗಾಣಿಗ, ವಿದ್ಯಾರ್ಥಿ ನಾಯಕ ರಿತ್ವಿಕ್ ಉಪಸ್ಥಿತರಿದ್ದರು.

ತರಗತಿ ಕೊಠಡಿಯನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉದ್ಘಾಟಿಸಿ ಶುಭ ಹಾರೈಸಿದರು.

ಶತಮಾನೋತ್ಸವ ಭವನ, ಪ್ರವೇಶಧ್ವಾರ ಕಛೇರಿ ಉದ್ಘಾಟನೆ, ಅಕ್ಷರ ದಾಸೋಹ ಕೊಠಡಿ, ಆರೋಗ್ಯ ಮತ್ತು ಶುಚಿತ್ವ ಕೇಂದ್ರವನ್ನು ಉದ್ಘಾಟಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಗುರುವಂದನೆ, ದಾನಿಗಳಿಗೆ ಮತ್ತು ಮಹಾ ಪೋಷಕರಿಗೆ ಗೌರವ ಸನ್ಮಾನ ನಡೆಯಿತು. ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶೈಲಜಾ ವಿ.ಶೆಟ್ಟಿ ಸ್ವಾಗತಿಸಿ, ವರದಿ ಮಂಡಿಸಿದರು. ಕೆಪಿ‌ಎಸ್ ವಂಡ್ಸೆ-ನೆಂಪು ಅಧ್ಯಾಪಕ ವಸಂತರಾಜ ಶೆಟ್ಟಿ, ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸತ್ಯಾವತಿ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಮಾಯಾಪುರಿ ಮಹಾತ್ಮೆ ಮತ್ತು ವೀರಮಣಿ ಕಾಳಗ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!