spot_img
Saturday, March 7, 2026
spot_img

ಹೆಬ್ರಿ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗೆ ಸುಬ್ರಹ್ಮಣ್ಯ ಶ್ರೀ ಭೇಟಿ

ಹೆಬ್ರಿ: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗೆ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ಶ್ರೀಪಾದರು ಭೇಟಿ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ದೇವರು ಮನುಷ್ಯನಿಗೆ ಅತ್ಯಮೂಲ್ಯ ಬುದ್ಧಿ ಶಕ್ತಿ ನೀಡಿದ್ದಾನೆ. ನಮ್ಮ ಬುದ್ಧಿಶಕ್ತಿಯನ್ನು ಒಂದು ಕಡೆ ಕೇಂದ್ರೀಕೃತ ಮಾಡಲು ನಾವು ವಿಶೇಷ ಸಾಧನೆ ಮಾಡಬೇಕು. ಆಗ ಜೀವನದಲ್ಲಿ ಸಾರ್ಥಕತೆ ಪಡೆಯಲು ಸಾಧ್ಯ. ಇದನ್ನು ಸಾಧಿಸಲು ನಾವು ಉತ್ತಮ ವಿದ್ಯೆಯನ್ನು ಪಡೆಯಬೇಕು. ಅದಕ್ಕೆ ಸಮಯವನ್ನು ವ್ಯರ್ಥ ಮಾಡಬಾರದು ಅಲ್ಲದೆ ಉತ್ತಮ ಸಂಸ್ಕಾರಯುತ ಶಿಕ್ಷಣ ಪಡೆಯಬೇಕು ಎಂದು ಅನುಗ್ರಹ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಭಾರತಿ ಟ್ರಸ್ಟ್ ನ ಅಧ್ಯಕ್ಷ ಸಿ‌ಎ ಎಂ ರವಿರಾವ್, ಟ್ರಸ್ಟ್ ನ ರಾಜೇಶ್ ನಾಯಕ್, ಲಕ್ಷ್ಮಣ ಭಟ್, ಸುಧೀರ್ ನಾಯಕ್, ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ಮೂಡುಬಿದ್ರೆಯ ಉದ್ಯಮಿ ಶ್ರೀಪತಿ ಭಟ್, ಸಂಸ್ಥೆಯ ಪಿ ಆರ್ ಓ ವಿಜಯಕುಮಾರ್ ಶೆಟ್ಟಿ, ಮೇಲ್ವಿಚಾರಕ ರಾಘವೇಂದ್ರ, ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್ ಹೆಚ್ ವೈ, ಅನಿತಾ, ಶಕುಂತಲಾ , ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಸ್ವಾಗತಿಸಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!