spot_img
Saturday, March 7, 2026
spot_img

 ರಿಷಿಕಾ ದೇವಾಡಿಗ ಇವರಿಗೆ ವಿದ್ಯಾರ್ಥಿ ಯುವ ಸಾಹಿತ್ಯ ರತ್ನ  ಪ್ರಶಸ್ತಿ ಪ್ರದಾನ

kundapura: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರಿ ರಿಷಿಕಾ ಆರ್ ದೇವಾಡಿಗ ಅವರಿಗೆ ಅವರ ಸಾಹಿತ್ಯ ಸಾಧನೆಯನ್ನು ಗುರುತಿಸಿ “ವಿದ್ಯಾರ್ಥಿ ಯುವ ಸಾಹಿತ್ಯ ರತ್ನ” ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 21ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ
ಸಮ್ಮೇಳನದಲ್ಲಿ  ಯೋಗೇಶ್ ಹೆಗಡೆ ನಿರ್ದೇಶಕರು, ನಿಟ್ಟೆ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿ, “ರಿಷಿಕಾ ಇವರ
ಭವಿಷ್ಯ ಜೀವನ ಉಜ್ವಲವಾಗಲಿ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ” ಎಂದು ಹಾರೈಸಿದರು.

ಸಮಾರಂಭದ ಸರ್ವಾಧ್ಯಕ್ಷತೆಯನ್ನು ವಹಿಸಿದ್ದ ಸಾಹಿತಿ ಸಿದ್ದಾಪುರ ವಸುದೇವ ಭಟ್, ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷರಾದ
ಶ್ರೀ ನೀಲಾವರ ಸುರೇಂದ್ರ ಅಡಿಗ, ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷರಾದ  ಪ್ರಭಾಕರ್ ಶೆಟ್ಟಿ, ಕೊಂಡಳ್ಳಿ, ಕ್ರಿಯೇಟಿವ್
ಶಿಕ್ಷಣ ಸಂಸ್ಥೆಯ ಸಂಸ್ಥಾಪಕರುಗಳು, ಶಿಕ್ಷಕಿ ರೂಪಾ ದೇವಾಡಿಗ ಹಾಗೂ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕನ್ನಡ ನಾಡಿನ ಖ್ಯಾತ ಸಾಹಿತಿ, ‘ಚುಟುಕು ಬ್ರಹ್ಮನಂದೇ ಖ್ಯಾತಿ ಪಡೆದ’ ಹೆಚ್ ದುಂಡಿರಾಜ್ ಅವರು
ಮಾತನಾಡಿ, ರಿಷಿಕಾ ಬರೆದ ಮೊದಲ ಪುಸ್ತಕ ‘ಮೊದಲ ಹೆಜ್ಜೆ’ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ, “ಚಿಕ್ಕ
ವಯಸ್ಸಿನಲ್ಲಿ ಸಾಹಿತ್ಯ ಲೋಕಕ್ಕೆ ಹೆಜ್ಜೆ ಇಟ್ಟಿರುವುದು ಅಪರೂಪದ ಸಾಧನೆ” ಎಂದು ಶ್ಲಾಘಿಸಿದರು.

ಸಮಾರಂಭದಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು, ಕನ್ನಡ ಸಾಹಿತ್ಯಾಸಕ್ತರು, ಬೇರೆ ಬೇರೆ
ಭಾಗಗಳಿಂದ ಆಗಮಿಸಿದ್ದ ಸಾಹಿತಿಗಳು ಹಾಗೂ ವಿದ್ಯಾರ್ಥಿ ಸಾಹಿತಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಶೋಭೆ
ತಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!