spot_img
Saturday, March 7, 2026
spot_img

ಬಳ್ಳಾರಿ ಅಹಿತಕರ ಘಟನೆ ಕಾಂಗ್ರೆಸ್ ನಿಯೋಗದಲ್ಲಿ ಮಾಜಿ ಸಂಸದ ಜೆ.ಪಿ.ಹೆಗ್ಡೆ

ಕುಂದಾಪುರ: ಬಳ್ಳಾರಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ಇದರಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕನ ನಡೆಸಿ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ನೇಮಕ ಮಾಡಿರುವ ನಿಯೋಗದಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೆ ಸ್ಥಾನ ನೀಡಲಾಗಿದೆ.

ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಸಂಸದ ಕುಮಾರ್ ನಾಯಕ್, ಚಳ್ಳಿಕೆರೆ ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರುಗಳಾದ ಜಕ್ಕಪ್ಪನವರು ಹಾಗೂ ಬಸವನಗೌಡ ಬಾದರ್ಲಿ ಅವರು ನಿಯೋಗದಲ್ಲಿ ಇದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಶನಿವಾರ ಬಳ್ಳಾರಿಗೆ ತೆರಳಿದ್ದ ನಿಯೋಗದ ಸದಸ್ಯರು, ಪರಿಸ್ಥಿತಿ ಅವಲೋಕನ ನಡೆಸಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರ ಮೂಲಗಳಿಂದ ಮಾಹಿತಿ ಸಂಗ್ರಹಿಸಿದೆ.

ಪಕ್ಷದ ಹಿರಿಯ ಮುಖಂಡರಾಗಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆ ಹಾಗೂ ಸೂಕ್ಷ್ಮ ವಿಚಾರಗಳ ಕಾರ್ಯಗಳಲ್ಲಿ ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ತಮಿಳುನಾಡು ಅಂತರಿಕ ಚುನಾವಣೆಯಲ್ಲಿಯೂ ಎ‌ಐಸಿಸಿ ವೀಕ್ಷಕರ ಜವಾಬ್ದಾರಿ ನೀಡಿತ್ತು ಎನ್ನುವುದು ಉಲ್ಲೇಖನೀಯ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!