spot_img
Saturday, March 7, 2026
spot_img

ಜನವರಿ -6ರಂದು ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಪ್ರಶಸ್ತಿ

ಮಂಗಳೂರು:  ಜನಸಾಮಾನ್ಯರಲ್ಲಿ ಆರ್ಥಿಕಾಭಿವೃದ್ದಿಯ ಛಾಪನ್ನು ಮೂಡಿಸಿರುವ ನವೋದಯ ಸ್ವ ಸಹಾಯ ಗುಂಪುಗಳ ಕಾರ್ಯ ದಕ್ಷತೆ ಹಾಗೂ ಸಂಘಟನೆಯ ವಿಶೇಷ ಅಧ್ಯಯನಕ್ಕೆ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಜನವರಿ -6 ಮಂಗಳವಾರ  ಎಸ್‌ಸಿಡಿಸಿಸಿ ಬ್ಯಾಂಕಿಗೆ ಪೂರ್ವಾಹ್ನ 11.00 ಗಂಟೆಗೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಸ್ಥಾಪಕ ‌ಟ್ರಸ್ಟಿ ,  ಸಹಕಾರ ರತ್ನ  ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಮಹಿಳಾ ಸಬಲೀಕರಣದಲ್ಲಿ ಸಲ್ಲಿಸಿದ ಮಹತ್  ಸಾಧನೆಯನ್ನು ಗುರುತಿಸಿ “ವಿಷನರಿ ಲೀಡರ್‌ಶಿಪ್ ಅವಾರ್ಡ್ ” (Visionary Leadership Award in WOMEN EMPOERMENT ) ನ್ನು  ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ವತಿಯಿಂದ ನೀಡಿ ಗೌರವಿಸಲಿದೆ.

ಇಂದಿನ ಸ್ಪರ್ಧಾತ್ಮಕ ಆರ್ಥಿಕ ಪರಿಸ್ಥಿತಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ  ಅಮೋಘ ಸಾಧನೆಗೈದಿದೆ. ಜೊತೆಗೆ ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರ ಏಳಿಗೆಗಾಗಿ ಶ್ರಮಿಸುತ್ತಿರುವ ಕಾರ್ಯವೈಖರಿ ಪ್ರಶಂಸನೀಯವೂ  ಆಗಿದೆ. ಇದಕ್ಕೆಲ್ಲ ಕಾರಣಕರ್ತರಾದವರು ಎಸ್‌ಸಿಡಿಸಿಸಿ ಬ್ಯಾಂಕಿನ ಅಭಿವೃದ್ಧಿ ರೂವಾರಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು.

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ತನ್ನ ದೂರದೃಷ್ಟಿಯ ಪ್ರಭಾವಶಾಲಿ ನಾಯಕತ್ವದಿಂದ ಸಹಕಾರ ಕ್ಷೇತ್ರದ ಮೂಲಕ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯ ಯಶಸ್ಸನ್ನು ಕಂಡಿದ್ದಾರೆ. ಈಗಾಗಲೇ 40000ಕ್ಕೂ ಹೆಚ್ಚು ನವೋದಯ ಸ್ವಸಹಾಯ ಗುಂಪುಗಳಿದ್ದು , 4.50 ಲಕ್ಷಕ್ಕೂ ಹೆಚ್ಚು ನವೋದಯ ಕುಟುಂಬಗಳ ಸದಸ್ಯರ ಬಲವನ್ನು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಹೊಂದಿದೆ. ಸಹಕಾರ ಕ್ಷೇತ್ರದ ಮೂಲಕ ನವೋದಯ ಸ್ವಸಹಾಯ ಗುಂಪುಗಳ ಬಲವರ್ಧನೆಗೊಳಿಸಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ತನ್ನ ಶ್ರೇಷ್ಠ ನಾಯಕತ್ವದಿಂದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಗೌರವ ಮನ್ನಣೆ ಗಳಿಸಿಕೊಂಡಿದ್ದಾರೆ.

ಕಳೆದ 32 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಇವರು ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೂ ಪಾತ್ರರಾಗಿರುತ್ತಾರೆ. ಇದೀಗ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ 15 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕಿಗೆ‌ ಆಗಮಿಸುತ್ತಿರುವ ದ್ಯೋತಕವಾಗಿ ಮತ್ತು ಮಹಿಳಾ ಸಬಲೀಕರಣದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಾಧಿಸಿದ ವಿಶೇಷ ಸಾಧನೆಗೆ  “ವಿಷನರಿ ಲೀಡರ್‌ಶಿಪ್ ಅವಾರ್ಡ್ ” (visionary leadership award) ನ್ನು  ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವತಿಯಿಂದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ತನ್ನ ತಂಡದೊಂದಿಗೆ ಜನವರಿ -6ರಂದು ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ಪ್ರದಾನ ಮಾಡಲಿರುವರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!