spot_img
Saturday, March 7, 2026
spot_img

ಕೋಡಿ ಅಶೋಕ್ ಪೂಜಾರಿ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪುರಸ್ಕಾರ

ಕುಂದಾಪುರ: ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ) ಕೊಡಗು ಇವರು ಆಚರಿಸಲಿರುವ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ಕೊಡಮಾಡಲ್ಪಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಸಮಾಜಸೇವಕ ಕೋಡಿ ಅಶೋಕ ಪೂಜಾರಿ ಆಯ್ಕೆಯಾಗಿದ್ದಾರೆ.

ಜನವರಿ 18-2026ರ ಭಾನುವಾರ ಹಾಸನದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕೋಡಿ ಅಶೋಕ ಪೂಜಾರಿ ಅವರು ಕಳೆದ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ನೊಂದವರಿಗೆ ಧ್ವನಿಯಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುತ್ತಿರುವ ಕುಟುಂಬಗಳಿಗೆ ದಾನಿಗಳ ಮೂಲಕ ಸ್ಪಂದನೆ ನೀಡಿದ್ದಾರೆ. ಸಮಾಜಮುಖಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ. ಹಗಲಿರುಳು ಸಾರ್ವಜನಿಕ ನೋವು ನಲಿವುಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!