spot_img
Saturday, March 7, 2026
spot_img

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪೋಸ್ಟ್: ಕುಂದಾಪುರ ಬಿಜೆಪಿ ವತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು

ಕುಂದಾಪುರ: ಕುಂದಾಪುರ ಬಿಜೆಪಿ ಮತ್ತು ಶಾಸಕರು ಹಾಗೂ ಆಪ್ತ ಸಹಾಯಕರ ಬಗ್ಗೆ ಅವಹೇಳನಕಾರಿಯಾಗಿ ವಾಟ್ಸಪ್ ಗ್ರೂಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುತ್ತಿರುವ ಸಚಿನ್ ಬಸ್ರೂರು ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕುಂದಾಪುರ ಬಿಜೆಪಿ ವತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಬಿಜೆಪಿಯ ಪ್ರಮುಖರೊಂದಿಗೆ ಆಧಾರ ರಹಿತವಾಗಿ ವಾಟ್ಸಾಪ್ ಗ್ರೂಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗಲು ಸಂಚನ್ನು ರೂಪಿಸುತ್ತಿರುವ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕುಂದಾಪುರ ನಗರ ಠಾಣೆಯಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಜಯರಾಂ ಗೌಡ ಇವರ ಮೂಲಕ ಉಪ ಪೊಲೀಸ್ ಅಧೀಕ್ಷಕರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕುಂದಾಪುರ ಮಂಡಲ ಉಪಾಧ್ಯಕ್ಷರಾದ ಸುನೀಲ್ ಶೆಟ್ಟಿ ಹೇರಿಕುದ್ರು, ರೂಪಾ ಬಾಬು ಪೈ, ಕುಂದಾಪುರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಓಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು, ರೈತ ಮೋರ್ಚಾ ಅಧ್ಯಕ್ಷ ಜಯಶೀಲ ಶೆಟ್ಟಿ, ಮಹಿಳಾ ಮೂರ್ಚಾ ಅಧ್ಯಕ್ಷೆ ಸೌರಭಿ ಪೈ, ಪುರಸಭಾ ಮಾಜಿ ಸದಸ್ಯರಾದ ಸಂತೋಷ್ ಶೆಟ್ಟಿ, ಪ್ರಭಾಕರ ವಿ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಕಡ್ಗಿ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಕುಂದಾಪುರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಖಾರ್ವಿ, ಸಂಪತ್ ಶೇರಿಗಾರ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಪಕ್ಷದ ಮುಖಂಡರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ದಿವಾಕರ ಕಢ್ಗಿ, ಜಯಂದ್ರ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!